ನಂದಿನಿ ಬ್ರಾಂಡ್‌ನ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.

ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನಂದಿನಿ ಬ್ರಾಂಡ್‌ನ ‘ರೆಡಿ ಟು ಕುಕ್’ ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್ವರ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಎಂಎಫ್ ಬಿಡುಗಡೆ ಮಾಡಿರುವ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ.5ರಷ್ಟು ಪ್ರೋಟೀನ್ ಅಂಶವನ್ನು ಮಿಶ್ರ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಎರಡು ವಿಧದ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 450 ಗ್ರಾಂ. ತೂಕದ ಪ್ಯಾಕೆಟ್‌ಗೆ ₹40 ಹಾಗೂ 900 ಗ್ರಾಂ. ತೂಕದ ಪ್ಯಾಕೆಟ್‌ಗೆ ₹80 ಗರಿಷ್ಠ ಮಾರಾಟ ದರ ನಿಗದಿಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...