ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ: ಸಚಿವ ಜಿ. ಪರಮೇಶ್ವರ್‌

Date:

ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, “ಮತೀಯ ಗೂಂಡಾಗಿರಿ ಘಟನೆಗಳನ್ನು ಹತ್ತಿಕ್ಕಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಎಚ್ಚರಿಸಿದರು.

“ದೆಹಲಿಯ ಸಭೆಯಲ್ಲಿ ಏನೆಲ್ಲ ನಿರ್ದೇಶನ ನೀಡುತ್ತಾರೋ ನೋಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಹೆಚ್ಚು ಸ್ಥಾನಗಳನ್ನು ಗೆಲ್ಲಿಸಬೇಕು ಎಂದು ಈಗಾಗಲೇ ಹೈಕಮಾಂಡ್ ಸೂಚನೆ ಕೊಟ್ಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮಮಂದಿರ ಉದ್ಘಾಟನೆಗೆ ಹೋಗದಿರಲು ತೀರ್ಮಾನಿಸಿರುವ ಪಕ್ಷದ‌ ನಿಲುವಿನ ಕುರಿತು ಮಾತನಾಡಿ, “ರಾಮಮಂದಿರ‌ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ. ಚುನಾವಣಾ ದೃಷ್ಟಿಯಿಂದ ತರಾತುರಿಯಲ್ಲಿ ಉದ್ಘಾಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್, ಉದ್ಘಾಟನೆಗೆ ಹೋಗದಿರಲು ನಿರ್ಧರಿಸಿದೆ. ಪಕ್ಷ ಹೇಳಿದ ಹಾಗೇ ಕೇಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್‌ ಚೇಲಾಗಳ ಬಿರಿಯಾನಿ ಊಟಕ್ಕೆ 150 ಕೋಟಿ: ಆರ್‌ ಅಶೋಕ ಆಕ್ರೋಶ

“ಕೆ ಎನ್ ರಾಜಣ್ಣ ಅವರು ಸರ್ಕಾರ ರಚನೆಯಾದ ಆರಂಭದಿಂದಲೂ ಹೆಚ್ಚುವರಿ ಉಪಮುಖ್ಯಮಂತ್ರಿ ನೇಮಕದ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಯಾಕೆ ನೇಮಕ ಮಾಡಬೇಕು ಎಂಬುದನ್ನೂ ಅವರು ವಿವರಣೆ ಕೊಟ್ಟಿದ್ದಾರೆ‌. ಈಗಾಗಲೇ ಎಐಸಿಸಿ ಅಧ್ಯಕ್ಷರು ಕೂಡಾ ಡಿಸಿಎಂ‌ ನೇಮಕದ ಕುರಿತು ಸ್ಪಷ್ಟನೆ ನೀಡಿದ್ದು, ಅವರ ಮಾತಿನಂತೆ ನಡೆದುಕೊಳ್ಳಬೇಕು. ನಾನು ಹೆಚ್ಚುವರಿ ಉಪಮುಖ್ಯಮಂತ್ರಿ ನೇಮಕ ವಿಚಾರ ಸಭೆಯಲ್ಲಿ ಪ್ರಸ್ತಾಪಿಸುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...