ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್ಸಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ: ಆರ್‌ ಅಶೋಕ್

Date:

ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, “ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ” ಎಂದರು.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೇವೆ. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ: ಅಶೋಕ್

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದೇ ವೇಳೆ ಮಾತನಾಡಿ, “ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ” ಎಂದು ಅಭಿಪ್ರಾಯಪಟ್ಟರು.

“ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ” ಎಂದು ತಿಳಿಸಿದರು.

ವೈ ಎ ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...