ವಿಧಾನ ಪರಿಷತ್ ಚುನಾವಣೆ | 300ಕ್ಕೂ ಹೆಚ್ಚು ಆಕಾಂಕ್ಷಿಗಳ ಪೈಕಿ 65 ಮಂದಿ ಶಾರ್ಟ್ ಲಿಸ್ಟ್: ಡಿ ಕೆ ಶಿವಕುಮಾರ್

Date:

“ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, “ಯತೀಂದ್ರ ಅವರ ವಿಚಾರವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೇ ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಂಗಳೂರಿನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ” ಎಂದು ತಿಳಿಸಿದರು.

ಹಿರಿಯರ ಅಭಿಪ್ರಾಯ ಕೇಳಬೇಕಿತ್ತು ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ್ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಷತ್‌ಗೆ ಆಯ್ಕೆಯ ಮಾನದಂಡ ಏನು ಎಂದು ಕೇಳಿದಾಗ, “ಸಂಘಟನೆಗೆ ಆದ್ಯತೆ ನೀಡಲಾಗುವುದು. ಅನೇಕ ಪ್ರಮುಖರು, ಹಿರಿಯರು ಹಾಗೂ ಚುನಾವಣೆಯಲ್ಲಿ ಸೋತವರು, ವಿಧಾನಸಭೆ ಟಿಕೆಟ್ ತ್ಯಾಗ ಮಾಡಿರುವವರು ಟಿಕೆಟ್ ಕೇಳಿದ್ದು, ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಜರ್ಮನಿಯಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಜೂ 2 ರಂದು ಶಾಸಕಾಂಗ ಪಕ್ಷದ ಸಭೆ

ಜೂನ್ 2 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಪರಿಷತ್ ಸದಸ್ಯರು, ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುವುದು. ಪರಿಷತ್ ಚುನಾವಣೆ ಸೇರಿದಂತೆ ಪಕ್ಷದ ಕೆಲವು ವಿಚಾರ ಚರ್ಚೆ ಮಾಡಲಾಗುವುದು. ಜೂನ್ 1ರಂದು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...