ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ಶೆಟ್ಟರ್, ಕಮಕನೂರು, ಬೋಸರಾಜು ನಾಮಪತ್ರ ಸಲ್ಲಿಕೆ

Date:

  • ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಅಭ್ಯರ್ಥಿಗಳಿಗೆ ಜೊತೆಯಾದ ಕಾಂಗ್ರೆಸ್ ಮುಖಂಡರು, ನಾಯಕರುಗಳು

ತೆರವಾಗಿರುವ ಮೂರು ಸ್ಥಾನಗಳ ವಿಧಾನ ಪರಿಷತ್‌ ಚುನಾವಣೆ ಸುಲುವಾಗಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಸಂಪುಟ ಸಚಿವರನೇಕರು ಹಾಜರಿದ್ದರು. ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿಯವರಿಗೆ ಮೂವರು ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ತಿಪ್ಪಣ್ಣ ಕಮಕನೂರ್, “ಕೋಲಿ ಸಮಾಜದ ಪ್ರಮುಖ ನಾಯಕರಲ್ಲಿ ನಾನೂ ಒಬ್ಬ. ನನಗೆ ಪರಿಷತ್ ಸದಸ್ಯ ಸ್ಥಾನ ಕೊಡಬೇಕು ಎಂದು ಸಮಾಜದ ಬೇಡಿಕೆ ಇತ್ತು. ನಾನು ಹತ್ತು ಹಲವಾರು ಕೆಲಸಗಳನ್ನು ಮಾಡಿದ್ದೀನಿ. ಈ ಸ್ಥಾನ ಅನಿರೀಕ್ಷಿತವಾಗಿ ನೀಡಿದ್ದಲ್ಲ. ನನ್ನ ವ್ಯಕ್ತಿತ್ವ ನೋಡಿ ಕೊಟ್ಟಿರುವ ಅವಕಾಶ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಅನ್ನ ಭಾಗ್ಯ | ರಾಜ್ಯದ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯ ಖರೀದಿಸಿ ಹಂಚಿ: ರೈತ ಸಂಘಗಳ ಮನವಿ

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಬೇಕಾದ ಜವಾಬ್ಧಾರಿ ನಮ್ಮೆಲ್ಲರ ಮೇಲಿದೆ. ನಮ್ಮದೂ ಪ್ರಭಾವಿ ಸಮುದಾಯವಾಗಿರುವ ಕಾರಣ ಅದರ ಸಂಘಟನೆಯನ್ನೂ ಮಾಡಬೇಕಿದೆ. ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಗೌರವಯುತ ಸ್ಥಾನ ಕಲ್ಪಿಸಿಕೊಡುತ್ತಿದೆ. ನಾನು ಪಕ್ಷದ ಕೆಲಸ ಮಾಡುವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾರಿ ಅಂತರದಲ್ಲಿ ಗೆಲ್ಲುತ್ತದೆ” ಎಂದು ಕಮಕನೂರು ವಿಶ್ವಾಸ ವ್ಯಕ್ತಪಡಿಸಿದರು.

“ನಮ್ಮ ಸಮಾಜಕ್ಕೆ ಎಸ್ಟಿ ಮೀಸಲಾತಿ ಸಿಗಬೇಕು, ಪರಿಷತ್ ಸದಸ್ಯನಾದ ಬಳಿಕ ಅದಕ್ಕೆ ನಾನು ಹೋರಾಟ ಮಾಡುತ್ತೇನೆ” ಎಂದು ತಿಪ್ಪಣ್ಣ ಹೇಳಿದರು. ಜಗದೀಶ್ ಶೆಟ್ಟರ್ ಪಕ್ಷದ ಕಾಳಜಿಗೆ ಧನ್ಯವಾದ ಸಲ್ಲಿಸಿದರೆ, ಬೋಸರಾಜು ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಅಂದ ಹಾಗೆ ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ. ಜೂನ್ 30 ರಂದು ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...