ಲಡಾಖ್ ಸಂಘರ್ಷ | ಸೋನಮ್ ವಾಂಗ್‌ಚುಕ್ ಬಂಧನವನ್ನು ಸಮರ್ಥಿಸಿಕೊಂಡ ಲೇಹ್ ಆಡಳಿತ

Date:

ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಲಡಾಖ್ ಆಡಳಿತವು ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಸೋನಮ್ ವಾಂಗ್‌ಚುಕ್, “ರಾಜ್ಯದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ನಿರ್ವಹಣೆ ಮತ್ತು ಸಮುದಾಯಕ್ಕೆ ಅಗತ್ಯವಾದ ಸೇವೆಗಳಿಗೆ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಆರೋಪಿಸಿದೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಲೇಹ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ ಬಳಿಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಸೋನಮ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಲೇಹ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಫಿಡವಿಟ್ ಸಲ್ಲಿಸಿದ್ದು, ಸೋನಮ್ ವಿರುದ್ಧದ ಆರೋಪಗಳನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದೆ. “ಕಾನೂನಿನ ಅಡಿಯಲ್ಲಿ ಕಡ್ಡಾಯಗೊಳಿಸಿದಂತೆ ಅವರ ವಿರುದ್ಧವಿರುವ ಆರೋಪಗಳನ್ನು ಸರಿಯಾಗಿ ಪರಿಗಣಿಸಿದ ನಂತರ ಈ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ” ಎಂದು ಒತ್ತಿ ಹೇಳಲಾಗಿದೆ.

ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರು NSA ಅಡಿಯಲ್ಲಿ ಬಂಧನವನ್ನು ಪ್ರಶ್ನಿಸಿ ಮತ್ತು ಸೋನಮ್ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಪೀಠದ ಮುಂದೆ ಲೇಹ್ ಆಡಳಿತ ಅಫಿಡವಿಟ್ ಸಲ್ಲಿಸಿದೆ.

ವಾಂಗ್‌ಚುಕ್ ಅವರನ್ನು 1980ರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಮತ್ತು ರಾಜಸ್ಥಾನದ ಜೋಧ್‌ಪುರದ ಕೇಂದ್ರ ಜೈಲಿಗೆ ವರ್ಗಾಯಿಸಲಾಗಿದೆ. ಅದೇ ವಿಷಯವನ್ನು ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರಿಗೆ ತಕ್ಷಣವೇ ದೂರವಾಣಿ ಮೂಲಕ ತಿಳಿಸಲಾಗಿದೆ. ಅವರು ತಮ್ಮ ಅರ್ಜಿಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಹಿರಿಯ ವಕೀಲ ಕಪಿಲ್ ಸಿಬಲ್ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ನಂತರ ಸುಪ್ರೀಂ ಕೋರ್ಟ್ ಬುಧವಾರಕ್ಕೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...