ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

Date:

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು 3 ಲಕ್ಷ 73 ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ 58,000 ಕೋಟಿ ರೂಪಾಯಿ ಮೀಸಲಿಡಲಾಗಿದೆ” ಎಂದರು.

“ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿವೃದ್ಧಿ ಕಾರ್ಯಗಳ ಸಹಿತ ಗ್ಯಾರಂಟಿ ಯೋಜನೆಗಳನ್ನು ಸಹ ನಿಲ್ಲಿಸದೇ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಸರಿಯಾದ ಮಾಹಿತಿಯನ್ನು ಪಡೆದು ಮಾತನಾಡಬೇಕು” ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಸಲಹೆ ನೀಡಿದ್ದಾರೆ.

ಕಡಿವಾಣ ಹಾಕಲು ಮನವಿ

“ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆಯನ್ನು ಯಾರೂ ಸಹ ನೀಡಬಾರದು. ಇಂತಹ ಹೇಳಿಕೆಗಳನ್ನು ಮುಂದೆ ಯಾರೂ ನೀಡದಂತೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಡಿವಾಣ ಹಾಕಬೇಕು” ಎಂದು ಈ ಮೂಲಕ ಮನವಿ ಮಾಡುತ್ತೇನೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...