ಪ್ರತಿಯೊಬ್ಬ ಕಾಂಗ್ರೆಸಿಗನೂ ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವಕ್ಕೆ ಸಾಕ್ಷಿಯಾಗಲಿ: ಡಿ ಕೆ ಶಿವಕುಮಾರ್

Date:

ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಡೆಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸ ಆಚರಣೆ ಕುರಿತು ಕೆಪಿಸಿಸಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“1924ರಲ್ಲಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವಹಿಸಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿದರು. ಈ ಹೆಮ್ಮೆಯ ಕ್ಷಣವನ್ನು ಆಚರಿಸುವ ಅವಕಾಶ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸಿಗರಿಗೆ ಮಾತ್ರ ಸಿಕ್ಕಿದೆ. ಹೀಗಾಗಿ ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಜಾಗದಿಂದಲೇ ಕೆಪಿಸಿಸಿ ಅಧ್ಯಕ್ಷನಾಗಿ ನಾನು ಪ್ರಜಾಧ್ವನಿಯಾತ್ರೆ ಆರಂಭಿಸಿದೆ. ಗಾಂಧಿ ಬಾವಿಯಿಂದ ನೀರು ತೆಗೆದು ರಸ್ತೆ ತೊಳೆದು ಸ್ವಚ್ಛ ಮಾಡಿ ನಮ್ಮ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ನಮ್ಮ ಹೋರಾಟ ಆರಂಭಿಸಿ, ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ತರಲು ಯಶಸ್ವಿಗಿದ್ದೇವೆ. ಈ ಶತಮಾನೋತ್ಸವದ ಕ್ಷಣದಲ್ಲಿ ಇತಿಹಾಸವನ್ನು ಮೆಲುಕು ಹಾಕುವ ಅದೃಷ್ಟ ನಮ್ಮದಾಗಿದೆ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಂಭ್ರಮ ಆಚರಿಸುತ್ತಿದ್ದೇವೆ. ಗಾಂಧೀಜಿ ಅವರು ಅಂದು ಕುಳಿತ ಸ್ಥಾನದಲ್ಲಿ ಇಂದು ನಮ್ಮವರೇ ಆದ ಖರ್ಗೆ ಅವರು ಕೂತಿದ್ದಾರೆ. ನಾವು ಯಾವ ರೀತಿ ಪಕ್ಷ ಕಟ್ಟಬೇಕು ಎಂದು ಹೊಸ ಅಧ್ಯಾಯ ಆರಂಭಿಸಿ 2028ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಮುನ್ನುಡಿ ಬರೆಯಬೇಕಿದೆ” ಎಂದರು.

“ಇದು ಪಕ್ಷದ ಜತೆಗೆ ಸರ್ಕಾರದ ಕಾರ್ಯಕ್ರಮವೂ ಆಗಿದೆ. ಹೆಚ್.ಕೆ. ಪಾಟೀಲ್, ವೀರಪ್ಪ ಮೋಯ್ಲಿ, ಬಿ.ಎಲ್ ಶಂಕರ್ ಅವರ ನೇತೃತ್ವದಲ್ಲಿ ಸರ್ಕಾರದ ಸಚಿವರು ಹಾಗೂ ಪಕ್ಷದ ಮುಖಂಡರನ್ನೊಳಗೊಂಡ 60 ಸದಸ್ಯರ ಸಮಿತಿ ರಚಿಸಲಾಗಿದೆ. ಸರ್ಕಾರ ಹಾಗೂ ಪಕ್ಷದ ವತಿಯಿಂದ ಹೇಗೆ ಕಾರ್ಯಕ್ರಮ ಮಾಡಬೇಕು ಎಂದು ಈ ಸಮಿತಿ ರೂಪುರೇಷೆ ಸಿದ್ಧಪಡಿಸಲಿದೆ. ಸರ್ಕಾರದ ವತಿಯಿಂದ ಈಗಾಗಲೇ ಗಾಂಧಿ ಜಯಂತಿ ದಿನದಂದು ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ಗಾಂಧಿ ನಡಿಗೆ ಕಾರ್ಯಕ್ರಮ ಮಾಡಲಾಗಿದೆ. ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಮಾಡಲಾಗಿದೆ. ಪಕ್ಷದವತಿಯಿಂದ ಗಾಂಧಿ ವೃತ್ತದಿಂದ ಭಾರತ ಜೋಡೋ ಭವನದವರೆಗೂ ಹೆಜ್ಜೆ ಹಾಕಿದ್ದೇವೆ” ಎಂದರು.

“ಬೆಳಗಾವಿಯಲ್ಲಿ ಗಾಂಧಿಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಜಾಗದಲ್ಲಿ ಇದೇ ತಿಂಗಳು 26ರಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಿಎಲ್ ಪಿ ನಾಯಕರು, 150 ಸಂಸದರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದು ಮಹಾತ್ಮಾ ಗಾಂಧಿ ಅವರ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಮುಖ್ಯಮಂತ್ರಿಗಳು ಅತಿಥಿಗಳಿಗೆ ಭೋಜನ ಕೂಟ ಆಯೋಜಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

“27ರಂದು ಬೆಳಗ್ಗೆ 11 ಗಂಟೆಗೆ ಐತಿಹಾಸಿಕ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ನೀವು ಪಾಲ್ಗೊಂಡು ಸಾಕ್ಷಿಯಾಗಬೇಕು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಮುಖಂಡರನ್ನು ನಿನ್ನೆ ಆಹ್ವಾನ ನೀಡಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲರ ಜವಾಬ್ದಾರಿ ಹಂಚಿದ್ದೇವೆ. ಕೆಪಿಸಿಸಿ ಪದಾಧಿಕಾರಿಗಳಿಗೆ ನೀಡಲಾಗಿರುವ ಪಟ್ಟಿ ಸಿದ್ಧಪಡಿಸಲಾಗಿದೆ” ಎಂದರು.

“ದೇಶಕ್ಕೆ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಮ್ಮ ಪಕ್ಷದ ವತಿಯಿಂದ ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮ ಮಾಡಲಾಯಿತು. ಸುಮಾರು 3 ಲಕ್ಷ ಜನ ಹೆಜ್ಜೆ ಹಾಕಿದ್ದರು. ಆಮೂಲಕ ಇತಿಹಾಸ ಪುಟಕ್ಕೆ ಸೇರಿದ್ದಿರಿ. ಈ ಕಾರ್ಯಕ್ರಮ ಮತ್ತಷ್ಟು ಪವಿತ್ರವಾದ ಕಾರ್ಯಕ್ರಮವಾಗಿದ್ದು, ಇದು ಕೇವಲ ಬೆಳಗಾವಿಗೆ ಮಾತ್ರ ಸೀಮಿತವಾಗಬಾರದು. ಅಖಂಡ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ತಿಳಿಸಿದರು.

“ಪ್ರತಿಯೊಬ್ಬ ಶಾಸಕರಿಗೆ ಶಿಷ್ಟಾಚಾರದ ಜವಾಬ್ದಾರಿ ನೀಡಲಾಗಿರುತ್ತದೆ. ಸಕ್ರಿಯರಾಗಿರುವ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಿಗೆ ನಾವು ಜವಾಬ್ದಾರಿ ಹಂಚುತ್ತಿದ್ದೇವೆ. ನಾವು ಯಾರಿಗೂ ಉಳಿದುಕೊಳ್ಳುವ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲ. ಪ್ರತಿ ಬ್ಲಾಕ್ ಹಾಗೂ ವಿಧಾನಸಭಾ ಕ್ಷೇತ್ರಗಳಿಂದ ಹಣ ಕೊಟ್ಟು ಜನರನ್ನು ಕರೆತರುವುದು ಬೇಡ. ಪಂಚಾಯ್ತಿ ಚುನಾವಣೆಯಲ್ಲಿ ನಿಂತು ಗೆದ್ದವರು, ಸೋತವರು, ವಿವಿಧ ಸಂಸ್ಥೆಗಳಲ್ಲಿ ನಾಮನಿರ್ದೇಶನವಾಗಿರುವವರು, ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಮಿತಿ ಸದಸ್ಯರು, ಪಾಲಿಕೆ ಸದಸ್ಯರುಗಳನ್ನು ಕರೆತರಬೇಕು. ಬೆಂಗಳೂರು ವಲಯದಿಂದ ಕನಿಷ್ಠ 100 ಜನರನ್ನಾದರೂ ನಿಮ್ಮ ನಿಮ್ಮ ವಾಹನಗಳಲ್ಲಿ ಆಗಮಿಸಬೇಕು” ಎಂದು ತಿಳಿಸಿದರು.

“ಮೈಸೂರು ದಸರಾವನ್ನು ಹೇಗ ನಾವು ವಿಜೃಂಭಣೆಯಿಂದ ಆಚರಣೆ ಮಾಡಿದ್ದೆವೋ ಅದೇ ರೀತಿ ಬೆಳಗಾವಿಯಲ್ಲೂ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ಸುಮಾರು 8 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗುವುದು. ನೀವೆಲ್ಲರೂ ಕಾಂಗ್ರೆಸಿಗರು, ಈ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುವ ಅವಕಾಶ ನಿಮಗೆ ಮಾತ್ರ ಇದೆ. ಈ ಕಾರ್ಯಕ್ರಮಕ್ಕಾಗಿ ನಾವು ಅನೇಕ ಸಮಿತಿಗಳನ್ನು ಆಯೋಜಿಸುತ್ತಿದ್ದೇವೆ” ಎಂದರು.

“ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಇದೇ 20-21ರಂದು ಪಕ್ಷದವತಿಯಿಂದ ಕಾರ್ಯಕರ್ತರ ಜಾಗೃತಿ ಸಭೆ ಮಾಡಿ ಈ ಕಾರ್ಯಕ್ರಮದ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕು. ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರುಗಳು ಈ ಸಭೆಗಳಿಗೆ ವೀಕ್ಷಕರಾಗಿ ತೆರಳಿ ಯಾವ ಕ್ಷೇತ್ರದಿಂದ ಎಷ್ಟು ಜನರನ್ನು ಹೊರಡಿಸುತ್ತಿದ್ದಾರೆ ಎಂದು ಮಾಹಿತಿ ಕಲೆಹಾಕಬೇಕು. ಈ ಭಾಗದ ಪ್ರತಿ ಕ್ಷೇತ್ರದಿಂದ ಕನಿಷ್ಠ 5000 ಜನರನ್ನು ಸಮಾವೇಶಕ್ಕೆ ಕರೆತರಬೇಕು. ಇದೊಂದು ದೊಡ್ಡ ಸಮಾವೇಶವಾಗಿದ್ದು, ಇದನ್ನು ಯಶಸ್ವಿಗೊಳಿಸಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...