ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

Date:

  • ವಿಶ್ವ ಏಡ್ಸ್ ದಿನ 2023, 25ನೇ ರಜತ ಮಹೋತ್ಸವ ಉದ್ಘಾಟಿಸಿದ ಸಿಎಂ
  • ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು

ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ಇತ್ತೀಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2015-2020ರವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೇ, ಇಡೀ ಸಮಾಜದ ಹೊಣೆಯಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು

“ಈ ಸಾಂಕ್ರಾಮಿಕ ರೋಗ ಪೂರ್ಣ ವಾಸಿಯಾದರೆ ಏಡ್ಸ್ ಪೀಡಿತರು ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಇನ್ನು ಐದಾರು ವರ್ಷಗಳಲ್ಲಿ ಸೊನ್ನೆಯ ದಿನ ಬರಲಿ ಎಂದು ಹಾರೈಸುತ್ತೇನೆ. ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ಕೆಲವರಿಗೆ ತಪ್ಪು ತಿಳಿವಳಿಕೆಗಳಿವೆ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು. ಆದರೆ ಹಾಗಾಗುವುದಿಲ್ಲ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಕಾಯಿಲೆ ತಡೆಗಟ್ಟಲು ಸಾಧ್ಯ” ಎಂದರು.

“ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್ ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು” ಎಂದು ಹೇಳಿದರು.

“ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 2017 ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ” ಎಂದರು.

ಏಡ್ಸ್ ಪೀಡಿತರೊಂದಿಗೆ ಸಿಎಂ ಮಾತುಕತೆ

“ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ತಗಲಿರುವ ವ್ಯಕ್ತಿಯೊಂದಿಗೆ ಮಾತನಾಡಿದ ಸಿಎಂ ಕಾಯಿಲೆ ಬಂದ ನಂತರ 26 ವರ್ಷಗಳ ಕಾಲ ಬದುಕಿದ್ದಾರೆ ಹಾಗೂ ಧೈರ್ಯವಾಗಿದ್ದಾರೆ ಎಂದು ಸಭಿಕರಿಗೆ ತಿಳಿಸಿದರು. ಆಂಜಿಯೋಪ್ಲಾಸ್ಟಿಯಾಗಿದ್ದರೂ ಧೈರ್ಯವಾಗಿ ಅದನ್ನು ಎದುರಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...