ಆಡಳಿತ ಪಕ್ಷ, ವಿಪಕ್ಷಗಳ ರಾಜಕೀಯ ಕಿತ್ತಾಟ ಹೊರಗಿರಲಿ, ಉತ್ತರ ಕರ್ನಾಟಕ ಬಗ್ಗೆ ಚರ್ಚೆ ನಡೆಯಲಿ: ಸಭಾಧ್ಯಕ್ಷ ಖಾದರ್

Date:

ರಾಜ್ಯದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಇದರಲ್ಲಿ ರಾಜ್ಯದ ಜನತೆಯ ಮುಖ್ಯವಾಗಿ ಉತ್ತರ ಕರ್ನಾಟಕದ ಭಾಗದ ಜನತೆಯ ಹಿತದೃಷ್ಟಿಯಿಂದ ಚರ್ಚೆ ಕಲಾಪ ನಡೆಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದ‌ರ್ ಮನವಿ ಮಾಡಿದರು.

ಇಟಲಿಯ ವ್ಯಾಟಿಕನ್ ಸಿಟಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನಕ್ಕೆ ತೆರಳುವ ಮುನ್ನ ಮಂಗಳೂರಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಆಡಳಿತ ಪಕ್ಷ ಹಾಗೂ ವಿಪಕ್ಷಗಳು ತಮ್ಮ ವಿವಿಧ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ” ಎಂದು ತಿಳಿಸಿದರು.

“ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ 19ರ ವರೆಗೆ ಮಾತ್ರ ಅಧಿವೇಶನ ನಡೆಯಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲು 9ರಿಂದ 20ರ ವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಸಾಹಿತ್ಯ ಸಮ್ಮೇಳನ ಡಿ. 20ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಮತ್ತು ಸಚಿವರು ಅದರಲ್ಲಿ ಪಾಲ್ಗೊಳ್ಳಲು ಅನುವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇವಲ ಕಾಗದದ ಹುಲಿಯಾಯಿತೇ ಪೂಜಾಸ್ಥಳಗಳ ಕಾಯಿದೆ?

‘ಮೋದಿ ನಂತರ ಅತಿ ಹೆಚ್ಚು ವಿದೇಶ ಪ್ರವಾಸ ಮಾಡಿದವರು ನೀವೇ ಇರಬೇಕು’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಈ ವರ್ಷ ಹತ್ತು ದೇಶಗಳ ಪ್ರವಾಸ ಮಾಡಿದ್ದೇನೆ. ವಿದೇಶ ಪ್ರವಾಸದಲ್ಲಿ ಇನ್ನೊಬ್ಬರ ನಂತರದ ಸ್ಥಾನ ಅಲ್ಲ, ಅವರಿಗಿಂತ ಜಾಸ್ತಿ ವಿದೇಶ ಪ್ರವಾಸ ಮಾಡಬೇಕು ಎಂಬುದು ನನ್ನ ಆಸೆ” ಎಂದು ಹಾಸ್ಯವಾಗಿ ನುಡಿದರು.

“ಸ್ಪೀಕ‌ರ್ ಹುದ್ದೆಗೆ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೇನೆ. ನಾನು ಸ್ಪೀಕರ್ ಆಗಿರುವ ಕಾರಣಕ್ಕಾಗಿಯೂ ನನ್ನ ಕ್ಷೇತ್ರಕ್ಕೆ ಹೆಚ್ಚು ಅನುದಾನ ತರುತ್ತಿದ್ದೇನೆ. ಸ್ಪೀಕರ್ ಹುದ್ದೆಗೆ ಇಷ್ಟೆಲ್ಲ ಅವಕಾಶಗಳು ಇವೆ, ಈ ಹುದ್ದೆ ಅಲಂಕರಿಸಲು ಶಾಸಕರು ಮುಂದೆ ಬರಬೇಕು” ಎಂದು ನಗುತ್ತ ಹೇಳಿದರು.

ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾವ ಬಾಲ್ ಬಂದರೂ ಬ್ಯಾಟ್ ಮಾಡುತ್ತೇನೆ ಎಂದು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಆದಾಗ್ಯೂ ರಾಜಕೀಯ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...