ಆಯುಷ್ಮಾನ್ – ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಆರ್ಥಿಕ ನೆರವು ನೀಡಲಿ: ದಿನೇಶ್ ಗುಂಡೂರಾವ್

Date:

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಗೆ ಕೇಂದ್ರ ಸರ್ಕಾರ ಶೇಕಡಾ 60 ರಷ್ಟು ಅನುದಾನ ನೀಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬರದಲ್ಲಿ ಪಾಲ್ಗೊಂಡಿರುವ ಸಚಿವರು, ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆಯ ಕುರಿತು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದರು.

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕರ್ನಾಟಕವು ಉತ್ತಮ ಪ್ರಗತಿ ಸಾಧಿಸುತ್ತಿದೆ. ಆದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ ಎಂದು ಕೇಂದ್ರ ಸಚಿವ ಮನ್ಸೂಖ್ ಮಂಡೋವಿಯಾ ಅವರಿಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ರಾಜ್ಯ ಸರ್ಕಾರ ಶೇ. 64 ರಷ್ಟು ಹಣಕಾಸಿನ ನೆರವು ನೀಡುತ್ತಿದ್ದು, ಕೇಂದ್ರ ಸರ್ಕಾರ ಶೇ. 36 ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. ಶೇ. 64 ರಷ್ಟು ಹಣಕಾಸನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ ಶೇ. 60 ರಷ್ಟು ಹಣಕಾಸಿನ ನೆರವು ನೀಡಿದರೆ ಪರಿಣಾಮಕಾರಿಯಾಗಿ ಹೆಚ್ಚಿನ ಜನರಿಗೆ ಯೋಜನೆಯನ್ನು ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೇ.60 ರಾಜ್ಯ ಸರ್ಕಾರ ಶೇ. 40 ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಮನವಿ ಸಲ್ಲಿಸಿದರು.

ಸಾರ್ವಜನಿಕರ ಆರೋಗ್ಯ ಭದ್ರತೆ ದೃಷ್ಟಿಕೋನದಲ್ಲಿ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಮಹತ್ವದ ಯೋಜನೆಗೆ ಈ ಬಗ್ಗೆ ಶೀಘ್ರ ನಿರ್ಣಯ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...