ದಸರಾ ಮಹೋತ್ಸವ | ಈ ವರ್ಷವಾದರೂ ಭ್ರಷ್ಟಾಚಾರದ ಸೋಂಕು ತಗುಲದಿರಲಿ: ಆರ್‌ ಅಶೋಕ್

Date:

ಕಾಂಗ್ರೆಸ್‌ ಸರ್ಕಾರ ‌ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ” ಎಂದು ಟೀಕಿಸಿದ್ದಾರೆ,

“ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ ಕಾಂಗ್ರೆಸ್‌ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...