ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರ ಸೋಲಿಸೋಣ: ಸಿಎಂ ಸಿದ್ದರಾಮಯ್ಯ ಕರೆ

Date:

ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

“ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಇವರು ಭಾರತೀಯರ ಹೆಮ್ಮೆ. ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಬೇಕು. ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದರೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ. ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲ” ಎಂದು ಹೇಳಿದರು.

“ನಾವು ಸರ್ವ ಜಾತಿ, ಜನಾಂಗ, ಧರ್ಮದವರಿಗೆ ಮತ್ತು ಸರ್ವ ವರ್ಗದವರ ಏಳೆಗೆಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ಈ ಜನಪರ ಕಾರ್ಯಕ್ರಮಗಳ ವಿರುದ್ಧ ತಪ್ಪು ಮಾಹಿತಿ ನೀಡಿ ಫಲಾನುಭವಿಗಳನ್ನು ಅವಮಾನಿಸಿದರು. ಗಾಂಧಿ ಅವರು ಬೆಳಗಾವಿ ಅಧಿವೇಶನದಲ್ಲಿ ಹಿಂದು-ಮುಸ್ಲಿಂ ಐಕ್ಯತೆ, ಗ್ರಾಮ ಸ್ವರಾಜ್ಯ, ಸರ್ವೋದಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಸಂದೇಶ ನೀಡಿದ್ದಾರೆ. ಇದು ಕಾಂಗ್ರೆಸ್ ಸಿದ್ದಾಂತ ಮತ್ತು ಕಾರ್ಯಕ್ರಮಗಳಾಗಿವೆ” ಎಂದರು.

“ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಶತಾಬ್ದಿ ಅರ್ಥಪೂರ್ಣವಾಗಿ ಇಡೀ ವರ್ಷ ನಡೆಯುತ್ತಿದೆ. ಇದರಲ್ಲಿ ಇಡೀ ರಾಜ್ಯದ ಎಲ್ಲಾ ವಯೋಮಾನದವರು ಭಾಗಿ ಆಗಿ ಅರ್ಥಪೂರ್ಣಗೊಳಿಸಿ” ಎಂದು ಕರೆ ನೀಡಿದರು.

ಮನಮೋಹನ್ ಸಿಂಗ್ ಮತ್ತು ನರೇಗ

“ನರೇಗಾ ಮತ್ತು ಅನ್ನಭಾಗ್ಯ ಕಾರ್ಯಕ್ರಮಗಳು ಕೋವಿಡ್ ಸಂದರ್ಭದಲ್ಲಿ ಕೋಟ್ಯಂತರ ಜನರನ್ನು ಹಸಿವಿನಿಂದ ರಕ್ಷಿಸಿ ಜೀವ ಉಳಿಸಿತು. ಹೀಗಾಗಿ‌ ಮಾಜಿ ಪ್ರಧಾನಿ ಅವರು ಜಾರಿಗೆ ತಂದ ನರೇಗಾ ಮತ್ತು ಆಹಾರ ಭದ್ರತೆ ಕಾಯ್ದೆಯನ್ನು ನಾವು ಸ್ಮರಿಸಬೇಕು” ಎಂದರು.

ಕಾನೂನು v/s ಕಾನ್ಸ್ಪಿರೆಸಿ

ಬಿಜೆಪಿ ರಾಜ್ಯದಲ್ಲಿ , ದೇಶದಲ್ಲಿ ಕಾನೂನು v/s ಕಾನ್ಸ್ಪಿರೆಸಿ ನಡೆಸುತ್ತಿದೆ. ಕಾನ್ಸ್ಪಿರೆಸಿ ಮೂಲಕ ಕಾನೂನನ್ನು ಸೋಲಿಸಲು ಯತ್ನಿಸಿ ರಾಜಕೀಯ ಅಸ್ಥಿರತೆ ಸೃಷ್ಟಿಸುತ್ತಿದೆ. ಮಹಾತ್ಮ ಗಾಂಧಿ ಅವರು ಹೇಳಿದಂತೆ , “ಎಲ್ಲಾ ನ್ಯಾಯಾಲಯಗಳಿಗಿಂತ ಆತ್ಮ‌ಸಾಕ್ಷಿಯ ನ್ಯಾಯಾಲಯ ದೊಡ್ಡದು”. ಈ ಆತ್ಮಸಾಕ್ಷಿಗೆ ತಕ್ಕಂತೆ ನಡೆಯೋಣ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಮತ್ತು ಹಾಲಿ, ಮಾಜಿ ಸಚಿವರು, ಕೆಪಿಸಿಸಿ ಹಾಲಿ, ಮಾಜಿ ಪದಾಧಿಕಾರಿಗಳಿ ಸೇರಿ ಹಲವಾರು ಪ್ರಮುಖರು, ನಿವೃತ್ತ ಸೇನಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...