ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆ ಇಲ್ಲ; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಕಿಡಿ

Date:

‘ಜಾತ್ಯತೀತ’ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರ ಕುರಿತು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ, “ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ? ಜೆಡಿಎಸ್ ನವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ. ಮೈತ್ರಿಯಿಂದ ಜೆಡಿಎಸ್ ಕೋಮುವಾದಿಯಾಗುತ್ತದಾ? ಅಥವಾ ಬಿಜೆಪಿ ಜಾತ್ಯತೀತ ಸಿದ್ಧಾಂತ ಅನುಸರಿಸುತ್ತದಾ? ಎಂಬುದನ್ನು ಕುಮಾರಸ್ವಾಮಿ ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ” ಎಂದು ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎಚ್.ಡಿ ಕುಮಾರಸ್ವಾಮಿ, “‘ಜಾತ್ಯತೀತ’ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯ ಅವರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್‌ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?” ಎಂದಿದ್ದಾರೆ.

“ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ – ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಈಗಳೆದಿದ್ದಾರೆ.

“2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್‌ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರ್ಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??” ಎಂದಿದ್ದಾರೆ.

“ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು. ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ. ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...