ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

Date:

ಗೋರಖ್‍ಪುರದ ಗೀತಾ ಪ್ರೆಸ್‍ಗೆ 2021ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ನೀಡಲು ಮುಂದಾಗಿರುವ ಕೇಂದ್ರದ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಟ್ವೀಟ್‌ ಮಾಡಿದ್ದು, 2021 ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ಗೀತಾ ಪ್ರೆಸ್‍ಗೆ ನೀಡುವುದು ಸಾವರ್ಕರ್ ಮತ್ತು ಗೋಡ್ಸೆಗೆ ಪ್ರಶಸ್ತಿ ನೀಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ನಿರ್ಧಾರವು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ಅಕ್ಷಯ ಮುಕುಲ್ ಬರೆದ ಗೀತಾ ಪ್ರೆಸ್ ಮತ್ತು ಹಿಂದೂ ಇಂಡಿಯಾದ ಮೇಕಿಂಗ್‍ನ ಕವರ್ ಪೇಜ್ ಅನ್ನು ಜೈರಾಂ ರಮೇಶ್ ಹಂಚಿಕೊಂಡಿದ್ದು, ಅಕ್ಷಯ ಮುಕುಲ್ ಅವರು ಮಹಾತ್ಮ ಗಾಂಧಿ ಕೈಗೊಂಡ ಸ್ವಾತಂತ್ರ್ಯ ಹೋರಾಟಗಳನ್ನು ಟೀಕಿಸಿದ್ದನ್ನು ಬಹಿರಂಗಪಡಿಸುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಿಂಸಾತ್ಮಕ ಮತ್ತು ಗಾಂಧಿ ವಿಚಾರಧಾರೆಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಗೀತಾ ಪ್ರೆಸ್‍ಗೆ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಹಲವು ರಾಜ್ಯಗಳಲ್ಲಿ ಮುಂಗಾರು ಜೋರು; ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ, ರಾಜಸ್ಥಾನದಲ್ಲಿ 5 ಸಾವು

1995ರಲ್ಲಿ ಸರ್ಕಾರವು ಸ್ಥಾಪಿಸಿದ ಗಾಂಧಿ ಶಾಂತಿ ಪ್ರಶಸ್ತಿಯು ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ಆದರ್ಶಗಳಿಗೆ ಗೌರವ ಸಲ್ಲಿಸುವ ವಾರ್ಷಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯು ರಾಷ್ಟ್ರೀಯತೆ, ಜನಾಂಗ, ಭಾಷೆ, ಜಾತಿ, ಮತ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲ ವ್ಯಕ್ತಿಗಳಿಗೂ ನೀಡಿ ಗೌರವಿಸಲಾಗುತ್ತದೆ.

ಪ್ರಶಸ್ತಿಯು 1 ಕೋಟಿ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ, ಫಲಕ ಮತ್ತು ಸಾಂಪ್ರದಾಯಿಕ ಕರಕುಶಲ/ಕೈಮಗ್ಗ ವಸ್ತುವನ್ನು ಒಳಗೊಂಡಿದೆ. ಹಿಂದಿನ ಪ್ರಶಸ್ತಿ ಪುರಸ್ಕೃತರಲ್ಲಿ ಇಸ್ರೋ, ರಾಮಕೃಷ್ಣ ಮಿಷನ್‍ನಂತಹ ಸಂಸ್ಥೆಗಳು ಹಾಗೂ ದಕ್ಷಿಣ ಆಫ್ರಿಕಾದ ನೆಲ್ಸನ್‌ ಮಂಡೇಲಾ ಹಾಗೂ ಬಾಂಗ್ಲಾದೇಶದ ಶೇಖ್ ಮುಜೀಬುರ್ ರೆಹಮಾನ್ ಕೂಡ ಸೇರಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೀತಾ ಪ್ರೆಸ್ ಅನ್ನು 1923 ರಲ್ಲಿ ಸ್ಥಾಪಿಸಲಾಯಿತು. ಇದು 162 ಮಿಲಿಯನ್ ಶ್ರೀಮದ್ ಭಗವದ್ಗೀತೆ ಸೇರಿದಂತೆ 14 ಭಾಷೆಗಳಲ್ಲಿ 417 ಮಿಲಿಯನ್ ಪುಸ್ತಕಗಳನ್ನು ಪ್ರಕಟಿಸಿದೆ ಎಂದು ಕೇಂದ್ರ ಸಚಿವಾಲಯದ ಹೇಳಿಕೆ ನೀಡಿದೆ.

ಗೀತಾ ಪ್ರೆಸ್‌ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡಿರುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಭಿನಂದನೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...