ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

Date:

  • ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್
  • ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತರ ಕುರಿತ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮವೊಂದರ ಜೊತೆಗೆ ಮಾತನಾಡಿ, ಬಿಜೆಪಿಯಿಂದ ಲಿಂಗಾಯತ ಸಿಎಂ ಅಸ್ತ್ರ ಪ್ರಯೋಗ ಮಾಡಿರುವ ಬಗ್ಗೆ ತಿರುಗೇಟು ನೀಡಿದ್ದರು. “ಈಗಾಗಲೇ ಲಿಂಗಾಯತರೇ ‘ಚೀಫ್ ಮಿನಿಸ್ಟರ್’ ಇದ್ದಾರೆ ಅಲ್ವಾ ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಈ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಸಹಜವಾಗಿಯೇ ಬಿಜೆಪಿ ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಸಿದ್ದರಾಮಯ್ಯ ಅವರನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾದದ ಕುರಿತು ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ತಮಗೆ ಬೇಕಾದಂತೆ ತಿರುಚಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದಿದ್ದಾರೆ.

“ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಸಿಎಂ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನನ್ನನ್ನು ಸೋಲಿಸಲು ಪಣತೊಟ್ಟಿರುವುದು ಬಿಜೆಪಿಯಲ್ಲ, ಬಿಎಲ್ ಸಂತೋಷ್ : ಸಿದ್ದರಾಮಯ್ಯ

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ ಎಚ್ ಪಟೇಲರು, ಬಿ ಡಿ ಜತ್ತಿ, ಎಸ್ ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ತಿಳಿಸಿದ್ದಾರೆ.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿದ್ದೇವೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ” ಎಂದು ಹೇಳಿದ್ದಾರೆ.

“ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...