ಸ್ಪರ್ಧಿಸಿದ್ದ ಐದೂ ಸ್ಥಾನಗಳಲ್ಲಿ ಗೆದ್ದ ಎಲ್‌ಜೆಪಿ; ಮೋದಿ ಸರ್ಕಾರದಲ್ಲಿ ಮಂತ್ರಿಯಾಗ್ತಾರಾ ಚಿರಾಗ್ ಪಾಸ್ವಾನ್?

Date:

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಿ, ಐದರಲ್ಲೂ ಗೆಲುವು ಸಾಧಿಸಿದೆ. ಎಲ್‌ಜೆಪಿಯ ಐವರು ಸಂಸದರಲ್ಲಿ ಒಬ್ಬರಾದ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಅವರು ಮೋದಿ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ವರದಿಯಾಗಿದೆ.

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನವೇ ಪಾಸ್ವಾನ್‌ ಅವರಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಂದ ಕರೆ ಬಂದಿದ್ದು, ಪ್ರಧಾನಿ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಸ್ವಾನ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ, ಮೊದಲ ಮತ್ತು ಎರಡನೇ ಅವಧಿಯ ಮೋದಿ ಸರ್ಕಾರಗಳಲ್ಲಿ ಚಿರಾಗ್ ಪಾಸ್ವಾನ್ ಅವರಿಗೆ ಸಚಿವ ಸ್ಥಾನಗಳನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ತಂದೆ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮಂತ್ರಿಗಿರಿಯನ್ನು ಬಿಟ್ಟುಕೊಟ್ಟಿದ್ದರು. ಆದರೆ, 2020ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರು ಕೊನೆಯುಸಿರೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮ್ ವಿಲಾಸ್ ಅವರ ಸಾವಿನ ಬಳಿಕ ಕುಟುಂಬದೊಳಗೆ ಕಲಹ ಉಂಟಾಗಿತ್ತು. ಚಿರಾಗ್ ಪಾಸ್ವಾನ್ ಮತ್ತು ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ಇಬ್ಬರ ನಡುವಿನ ವೈಮನಸ್ಸಿನಿಂದ ಪಕ್ಷವು ಇಬ್ಬಾಗವಾಯಿತು. ಬಿಜೆಪಿ ಪಶುಪತಿ ಅವರ ಪರವಾಗಿ ನಿಂತರೂ, ಚಿರಾಗ್ ಅವರು ಎನ್‌ಡಿಎಗೆ ತಮ್ಮ ಬೆಂಬಲವನ್ನು ಮುಂದುವರೆಸಿದ್ದರು. ಅಲ್ಲದೆ, ತಮ್ಮ ಬಣವನ್ನು ಬಲಗೊಳಿಸಲು, ಜನಸಂಪರ್ಕ ಸಾಧಿಸಲು ‘ಬಿಹಾರ್ ಫಸ್ಟ್, ಬಿಹಾರಿ ಫಸ್ಟ್’ ಅಭಿಯಾನ ಪ್ರಾರಂಭಿಸಿದ್ದರು.

2024ರ ಲೋಕಸಭಾ ಚುನಾವಣೆಗೂ ಮುನ್ನ, ಜಾತಿ ಲೆಕ್ಕಾಚಾರದಲ್ಲಿ ಬಿಹಾರದಲ್ಲಿ ಹೆಚ್ಚು ಮತಗಳನ್ನು ಸೆಳೆಯಲು ಚಿರಾಗ್ ಬಣ ಪ್ರಬಲವಾಗಿ ಎಂದು ಭಾವಿಸಿದ ಬಿಜೆಪಿ, ಚಿರಾಗ್ ಜೊತೆಗೂ ಸೀಟು ಹಂಚಿಕೆ ಮಾಡಿಕೊಂಡು, ಹೋರಾಟ ನಡೆಸಿತು. ಈಗ, ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ಸಾಧ್ಯವಾಗ ಹಿನ್ನೆಲೆ, ಚಿರಾಗ್ ಅವರಂತಹ ಸಣಣ ಮಿತ್ರಪಕ್ಷಗಳು ಸರ್ಕಾರ ರಚಿಸಲು ಬಿಜೆಪಿಗೆ ಬಲ ನೀಡಿವೆ.

ಹೀಗಾಗಿ, ಮೋದಿ ನೇತೃತ್ವದ ಹೊಸ ಸರ್ಕಾರದಲ್ಲಿ ಚಿರಾಗ್ ಪಾಸ್ವಾನ್‌ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...