ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

Date:

ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ, ದೇಶದ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, “ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಹಂಚಿಕೊಳ್ಳಲು ಬಯಸುತ್ತೇನೆ. ಇದು ನನಗೆ ತುಂಬಾ ಸಂತಷದ ವಿಷಯ. ಈ ಬಗ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅಡ್ವಾಣಿ ಕೂಡ ಒಬ್ಬರು. ದೇಶದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾದುದು. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ದೇಶದ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಅವರ ಜೀವನ ಮಾದರಿಯಾದುದು. ಅವರು ನಮ್ಮ ಗೃಹ ಮಂತ್ರಿ ಮತ್ತು ಮಾಹಿತಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ” ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮಮಂದಿರ-ಬಾಬರಿ ಮಸೀದಿಯ ವಿವಾದ ರೂವಾರಿ

ರಾಮಮಂದಿರ ನಿರ್ಮಾಣಕ್ಕೆ ರಥಯಾತ್ರೆ, ರಾಮಮಂದಿರ ನಿರ್ಮಾಣ ಹೋರಾಟ, ಬಾಬರಿ ಮಸೀದಿ ವಿವಾದ ಸೇರಿದಂತೆ ಇನ್ನಿತರೆ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರು. ವಾಜಪೇಯಿ ಸರ್ಕಾರದಲ್ಲಿ ಗೃಹ ಸಚಿವ, ಉಪಪ್ರಧಾನಿಯಾಗಿ ಕೆಲಸ ಮಾಡಿದ್ದರು.

ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿಗೆ ರಾಮಮಂದಿರ ಉದ್ಘಾಟನೆಗೆ ಬರಬೇಡಿ ಎಂದಿದ್ದ ಟ್ರಸ್ಟ್!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಜ.22ರಂದು ನಡೆದ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದಂತೆ ಟ್ರಸ್ಟ್‌ ಸೂಚಿಸಿತ್ತು.

“ಎಲ್‌ಕೆ ಅಡ್ವಾಣಿ ಮತ್ತು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಅವರನ್ನು ಬರದಂತೆ ಕೇಳಿಕೊಳ್ಳಲಾಗಿದೆ” ಎಂದು ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು.

ಆ ಬಳಿಕ ಜ.22ರಂದು ಚಳಿ ಮತ್ತು ಪ್ರತಿಕೂಲ ಹವಾಮಾನದ ಕಾರಣಕ್ಕೆ 96 ವರ್ಷ ವಯಸ್ಸಿನ ಅಡ್ವಾಣಿ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಿರಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...