ಲೋಕಸಭೆ ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಜೊತೆ ನಿಲ್ಲಬೇಕು: ಸಚಿವ ಜಮೀರ್

Date:

ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ದೇಶದ ಜನತೆಯ ಒಳಿತಿಗಾಗಿ ಶ್ರಮಿಸುವ ಏಕೈಕ ಪಕ್ಷ ಕಾಂಗ್ರೆಸ್” ಎಂದರು.

“ಲೋಕಸಭೆ ಚುನಾವಣೆ ಒಂದು ರೀತಿಯಲ್ಲಿ ಅಗ್ನಿ ಪರೀಕ್ಷೆ ಆಗಿದ್ದು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವುದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಹೊಣೆಗಾರಿಕೆ ಮಾತ್ರವಲ್ಲ ನಮ್ಮೆಲ್ಲರ ಜವಾಬ್ದಾರಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲ ಸಮುದಾಯದ ಜತೆ ಅಲ್ಪಸಂಖ್ಯಾತ ಸಮುದಾಯ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಸಿತು. ಅಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣದಲ್ಲೂ ಬದಲಾವಣೆ ಗಾಳಿ ಬೀಸಿತು. ಇದೀಗ ಇಡೀ ರಾಷ್ಟ್ರದಲ್ಲಿ ಬದಲಾವಣೆ ತರಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

“ನಾನು ಮೂಲತಃ ನಾನು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದೆ. ಇಲ್ಲಿಗೆ ಬಂದ ನಂತರ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ಸಮುದಾಯಕ್ಕೆ ಎಷ್ಟು ದೊಡ್ಡ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ ಎಂಬುದು ಅರ್ಥವಾಯಿತು. ಸಮುದಾಯವು ಅಷ್ಟೇ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಜತೆ ನಿಂತಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡೋಣ” ಎಂದು ತಿಳಿಸಿದರು.

ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಅಲ್ಕಾ ಲಂಬಾ, ಎಲ್ಲ ರಾಜ್ಯಗಳ ರಾಜ್ಯಾಧ್ಯಕ್ಷರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...