ಲೋಕಸಭಾ ಚುನಾವಣೆ | ಒಡಿಶಾದಲ್ಲಿ ಬಿಜೆಪಿಗೆ ಪ್ರಭಾವಿ ಮುಖಗಳೇ ಇಲ್ಲ

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ನಾನಾ ರಾಜ್ಯಗಳಲ್ಲಿ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಜೆಪಿ ಸೀಟು ಹಂಚಿಕೆಯ ಕಸರತ್ತು ನಡೆಸುತ್ತಿದೆ. ಒಡಿಶಾದಲ್ಲಿ ಬಿಜೆಡಿ ಜೊತಿನ ಮೈತ್ರಿಯನ್ನು ಕಡಿತಗೊಳಿಸಿರುವ ಬಿಜೆಪಿ, ಏಕಾಂಗಿ ಸ್ಪರ್ಧೆಗೆ ಮುಂದಾಗಿದೆ. ಅದರೆ, ಆ ರಾಜ್ಯದಲ್ಲಿ ಪ್ರಚಾರಕ್ಕೆ ಸ್ಥಳೀಯ ಪಾಪುಲರ್ ಮುಖಗಳ ಕೊರತೆ ಪಕ್ಷವನ್ನು ಕಾಡುತ್ತಿದೆ.

ಒಡಿಶಾದ 21 ಲೋಕಸಭಾ ಕ್ಷೇತ್ರಗಳಲ್ಲಿ ಕೋರಾಪುಟ್‌ ಕ್ಷೇತ್ರವು ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ಆದರೆ, ಈ ಕ್ಷೇತ್ರದಲ್ಲಿಯೇ ಬಿಜೆಪಿಗೆ ಪ್ರಬಲ ಮುಖಗಳಿಲಲ್ಲ. ಸದ್ಯ, ಈ ಕ್ಷೇತ್ರದಿಂದ ಸ್ಪರ್ಧಿಸಲು ಮೂವರು ಬಿಜೆಪಿ ಮುಖಂಡರು – ಸಿಬಾ ಶಂಕರ್ ಉಲಕ, ಕಲಿರಾಮ್ ಮಾಝಿ ಮತ್ತು ಭಾಗಬನ್ ಮುದುಲಿ – ಅಕಾಂಕ್ಷಿಗಳಾಗಿದ್ದಾರೆ. ಆದರೆ, ಅವರ ಹೆಸರುಗಳು ಮತದಾರರಿಗೆ ತಿಳಿದೇ ಇಲ್ಲ ಎಂಬುದು ಗಮನಾರ್ಹ.

ಉಲಕ ಅವರು 2014ರಲ್ಲಿ ಕೋರಾಪುಟ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಕೇವಲ 89,788 ಮತಗಳನ್ನು ಪಡೆದು ಹೀನಾಯ ಸೋಲುಂಡಿದ್ದರು. 2019ರ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದ ಭಾಗವಾಗಿರುವ ಬಿಸ್ಸಾಮಕಟ್ಟಕ್ ಕ್ಷೇತ್ರದಲ್ಲಿ ಸ್ಪರ್ಧಿಸಿ, ಮೂರನೇ ಸ್ಥಾನ ಗಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಝಿ ಅವರು ಪ್ರಸ್ತುತ ಎಸ್‌ಟಿ ಬಿಜೆಪಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ. ಅವರು ರಾಯಗಡ ಜಿಲ್ಲೆಯವರಾಗಿದ್ದು, ಇತ್ತೀಚೆಗೆ ಪಕ್ಷದ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಬಗ್ಗೆ ಮತದಾರರಿಗೆ ಸೀಮಿತ ಪರಿಚಯವಿದೆ. ಅದೇ ರೀತಿ, ಲಕ್ಷ್ಮೀಪುರದ ಜಿಲ್ಲಾ ಸರಪಂಚ ಸಂಘದ ಮಾಜಿ ಅಧ್ಯಕ್ಷ ಭಗಬನ್ ಮುದುಳಿ ಅವರು ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸಲು ಹೆಣಗಾಡುತ್ತಿದ್ದಾರೆ.

ಒಡಿಶಾದ ರಾಯಗಡ, ಬಿಸ್ಸಾಮಕಟ್ಟಕ್, ಗುಣಪುರ್, ಕೊರಾಪುಟ್, ಲಕ್ಷ್ಮೀಪುರ, ಪೊಟ್ಟಂಗಿ ಮತ್ತು ಜೇಪೋರ್ ಕ್ಷೇತ್ರಗಳಲ್ಲಿ ಈ ಮೂವರು ನಾಯಕರಿಗೆ ತಳಮಟ್ಟದ ಸಂಪರ್ಕವೇ ಇಲ್ಲ. ಹೀಗಾಗಿ, ಪ್ರಾದೇಶಕ ನಾಯಕತ್ವದ ಕೊರತೆಯಿಂದ ಬಿಜೆಪಿ ಹೆಣಗಾಡುತ್ತಿದೆ.

ರಾಜಕೀಯ ವೀಕ್ಷಕ ಕೀರ್ತಿ ಚಂದ್ರ ಸಾಹು ಪ್ರಕಾರ, ಬಿಜೆಪಿಯ ಎಲ್ಲ ಟಿಕೆಟ್‌ ಆಕಾಂಕ್ಷಿಗಳು ಮತದಾರರನ್ನು ಸೆಳೆಯಲು ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಮತ್ತು ಪಕ್ಷದ ಚಿಹ್ನೆಯ ಗುರುತಿನಲ್ಲಿ ಚುನಾವಣೆ ಎದುರಿಸಬೇಕಾಗಿದೆ. ಯಾವ ಆಕಾಂಕ್ಷಿಗಳಿಗೂ ಜನರೊಂದಿಗೆ ನೇರ ಸಂಪರ್ಕವೇ ಇಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...