ಲೋಕಸಭಾ ಚುನಾವಣೆ | ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ; ಸಚಿವರ ಮಕ್ಕಳಿಗೆ ‘ಟಿಕೆಟ್‌ ಭಾಗ್ಯ’

Date:

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆದು, ಹುರಿಯಾಳುಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸಿದ ಬಳಿಕ ಈ ಪಟ್ಟಿ ಬಿಡುಗಡೆಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಕೆ ಜೆ ಜಾರ್ಜ್‌ ಮತ್ತಿತರರು ಈ ಸಭೆಯಲ್ಲಿ ಭಾಗಿಯಾಗಿ, ಉಳಿದಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರದ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಿದೆ.

WhatsApp Image 2024 03 21 at 8.15.33 PM

ಕಾಂಗ್ರೆಸ್‌ ಈಗಾಗಲೇ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈಗ ಪ್ರಕಟಗೊಂಡಿರುವ 17 ಕ್ಷೇತ್ರಗಳ ಪೈಕಿ ಬಾಗಲಕೋಟೆಯಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತ ಪಾಟೀಲ, ಚಿಕ್ಕೋಡಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹೆಸರನ್ನು ಅಂತಿಮಗೊಳಿಸಿ, ಟಿಕೆಟ್ ನೀಡಲಾಗಿದೆ. ಈ ಮೂಲಕ ಐದು ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಮಣೆ ಹಾಕಲಾಗಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಸೇರಿದಂತೆ ಒಟ್ಟು 4  ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಪ್ರಕಟಿಸಿಲ್ಲ.

WhatsApp Image 2024 03 21 at 9.27.05 PM

  1. ಬೆಂಗಳೂರು ಉತ್ತರ – ಪ್ರೊ.ಎಂ.ವಿ. ರಾಜೀವ್ ಗೌಡ
  2. ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
  3. ಬೆಂಗಳೂರು ಸೆಂಟ್ರಲ್ – ಮನ್ಸೂರ್ ಆಲಿಖಾನ್
  4. ಮೈಸೂರು – ಎಂ.ಲಕ್ಷ್ಮಣ್
  5. ರಾಯಚೂರು – ಜಿ. ಕುಮಾರನಾಯ್ಕ್
  6. ಕೊಪ್ಪಳ – ರಾಜಶೇಖರ ಬಸವರಾಜ್ ಹಿಟ್ನಾಳ್
  7. ಬೀದರ್ – ಸಾಗರ್ ಖಂಡ್ರೆ
  8. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
  9. ಉತ್ತರ ಕನ್ನಡ – ಡಾ. ಅಂಜಲಿ ನಿಂಬಾಳ್ಕರ್
  10. ದಕ್ಷಿಣ ಕನ್ನಡ – ಆರ್.ಪದ್ಮರಾಜ್
  11. ಚಿತ್ರದುರ್ಗ – ಬಿ ಎನ್ ಚಂದ್ರಪ್ಪ
  12. ಕಲಬುರಗಿ – ರಾಧಾಕೃಷ್ಣ
  13. ಧಾರವಾಡ‌ – ವಿನೋದ ಅಸೂಟಿ
  14. ಬಾಗಲಕೋಟೆ – ಸಂಯುಕ್ತ ಪಾಟೀಲ್
  15. ಉಡುಪಿ-ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗಡೆ
  16. ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
  17. ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...