ಲೋಕಸಭೆ ಚುನಾವಣೆ ಸ್ಪರ್ಧೆ ವಿಚಾರ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಜಗದೀಶ್ ಶೆಟ್ಟರ್

Date:

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, “ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರುತ್ತಿದೆ ಎಂಬುದು ಗೊತ್ತಿಲ್ಲ” ಎಂದರು.

ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಬಿಜೆಪಿ ಸೇರ್ಪಡೆಯಾದ ಬಳಿಕ ಜಗದೀಶ್‌ ಶೆಟ್ಟರ್‌ ಹೇಳಿಕೆ ನೀಡಿದ್ದರು.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಶೆಟ್ಟರ್ ಅವರ ದೆಹಲಿ ಹೇಳಿಕೆ ಕುತೂಹಲ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿಯಲ್ಲಿ ಬದಲಾಗಿದ್ದ ರಾಜಕೀಯ ಲೆಕ್ಕಾಚಾರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಮಂಗಳಾ ಅಂಗಡಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.

ಆದರೆ, ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಲೆಕ್ಕಾಚಾರಗಳು ಬದಲಾಗಿದ್ದವು. ಶೆಟ್ಟರ್​​, ಅಂಗಡಿ ಇಬ್ಬರೂ ಬೀಗರಾಗಿರುವ ಹಿನ್ನೆಲೆ ಅವರಿಗೆ ರಾಜಕೀಯ ಲಾಭ ದೊರೆಯುವ ಮಾತುಗಳು ಮುನ್ನೆಲೆಗೆ ಬಂದಿದ್ದವು.

ಶನಿವಾರ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ದೆಹಲಿಯಲ್ಲಿ ಆರಂಭವಾಗಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಯುತ್ತಿದೆ.

ಜಗದೀಶ್ ಶೆಟ್ಟರ್ ಅವರೇ ಬೆಳಗಾವಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ ಅಥವಾ ಹಾವೇರಿ  ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಊಹಾಪೋಹಗಳಿಗೆ ಸದ್ಯದಲ್ಲೇ ತೆರೆ ಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...