ಲೋಕಸಭಾ ಚುನಾವಣೆ | ಮಂಡ್ಯದಲ್ಲಿ ಸ್ಪರ್ಧೆ: ನಾರಾಯಣಗೌಡ ಮನೆಗೆ ಎಚ್‌ಡಿಕೆ ದೌಡು

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಜಿಲ್ಲೆಯಲ್ಲಿ ಬಿಜೆಪಿಗರನ್ನು ವಿಶ್ವಾಸಕ್ಕೆ ಪಡೆಯುಲು ಮುಂದಾಗಿದ್ದಾರೆ. ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಸಿ ನಾರಾಯಣಗೌಡರ ಮನೆಗೆ ದೌಡಾಯಿಸಿದ್ದು, ಬೆಂಬಲ ಕೇಳಿದ್ದಾರೆ.

2019ರಲ್ಲಿ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಜೆಡಿಎಸ್‌ ಶಾಸಕರಾಗಿದ್ದ ನಾರಾಯಣಗೌಡ, ಜೆಡಿಎಸ್‌ ತೊರೆದು, ಬಿಜೆಪಿ ಸೇರಿದ್ದರು. ಬಳಿಕ, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಗೆದ್ದು, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೇಳಬೇಕೆಂದು ನಾರಾಯಣಗೌಡ ಇಚ್ಚಿಸಿದ್ದರು. ಆದರೆ, ಸಂಸದೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳ ಬಂದ ಬಳಿಕ, ಟಿಕೆಟ್ ಕೇಳದೆ ಹಿಂದೆ ಸರಿದಿದ್ದರು. ಸುಮಲತಾ ಪರವಾಗಿ ಕೆಲಸ ಮಾಡಲು ಒಲವು ತೋರಿದ್ದರು. ಆದರೆ, ಮಂಡ್ಯವನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ಹೀಗಾಗಿ, ಬಿಜೆಪಿಯಲ್ಲಿ ಅಪಸ್ವರಗಳು ಹೆಚ್ಚಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಲ್ಲೂ, ಜೆಡಿಎಸ್‌ನಿಂದ ಕುಮಾರಸ್ವಾಮಿಯೇ ಕಣಕ್ಕಿಳಿದಿರುವುದು ಜೆಡಿಎಸ್‌ ತೊರೆದು ಬಿಜೆಪಿಗೆ ಬಂದಿದ್ದ ನಾರಾಯಣಗೌಡ, ಶಿವರಾಮೇಗೌಡಗೆ ನುಂಗಲಾರದ ತುತ್ತಾಗಿ ಪರಿಗಣಿಸಿದೆ. ಹೀಗಾಗಿ, ಸುಮಲತಾರನ್ನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತಂತ್ರ ಎಣೆಯುತ್ತಿದ್ದಾರೆ.

ಇದೆಲ್ಲವನ್ನೂ ಅರಿತಿರುವ ಕುಮಾರಸ್ವಾಮಿ, ಬುಧವಾರ (ಮಾರ್ಚ್‌ 27) ಬೆಂಗಳೂರಿನಲ್ಲಿರುವ ನಾರಾಯಣಗೌಡರ ನಿವಾಸಕ್ಕೆ ತೆರಳಿ, ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, 2019ರಲ್ಲಿ ಕುಮಾರಸ್ವಾಮಿ ವಿರುದ್ಧ ಸಾಲು-ಸಾಲು ಆರೋಪಗಳನ್ನು ಮಾಡಿದ್ದ ನಾರಾಯಣಗೌಡ ಜೆಡಿಎಸ್‌ ನಾಯಕರ ಮೇಲೆ ಭಾರೀ ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಅವರು ಕುಮಾರಸ್ವಾಮಿ ತಂತ್ರಕ್ಕೆ ಮಣಿಯುವರೇ ಎಂಬುದು ಕುತುಹಲಕಾರಿ ವಿಚಾರ.

ಈ ನಡುವೆ, ಸಚಿವ ಚಲುವರಾಯಸ್ವಾಮಿಯೊಂದಿಗೆ ಉತ್ತಮ ಒಡನಾಟವನ್ನೂ ಹೊಂದಿರುವ ನಾರಾಯಣಗೌಡ ಕಾಂಗ್ರೆಸ್‌ ಸೇರಬಹುದು ಎಂಬ ಮಾತುಗಳೂ ಇವೆ. ಆದರೆ, ಕಾಂಗ್ರೆಸ್‌ಗೆ ಹೋಗುವ ಇರಾದೆ ಇಲ್ಲವೆಂದು ಅವರು ಹೇಳಿದ್ದಾರೆ.

ಇದೀಗ, ಕುಮಾರಸ್ವಾಮಿಗೆ ಬೆಂಬಲ ನೀಡುವರೇ?  ಅಥವಾ ಸುಮಲತಾರನ್ನು ಅಕಾಡಕ್ಕಿಳಿಸಿ, ಕುಮಾರಸ್ವಾಮಿ ಅವರನ್ನು ಕಟ್ಟಿಹಾಕುವರೇ? ಎಂಬುದು ಎಲ್ಲರ ಚಿತ್ತ ಸೆಳೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...