ಲೋಕಸಭೆ ಚುನಾವಣೆ | ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಬರದವರು ಅಸಮರ್ಥ ಸಚಿವರಾಗುತ್ತಾರೆ: ಬಿ ನಾಗೇಂದ್ರ

Date:

ಜವಾಬ್ದಾರಿ ಕೊಟ್ಟ ಲೋಕಸಭೆ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರದೇ ಇದ್ದಲ್ಲಿ ಅವರು ಅಸಮರ್ಥ ಸಚಿವರಾಗುತ್ತಾರೆ. ಡಾ. ಜಿ ಪರಮೇಶ್ವರ್ ಹೇಳಿದ್ದು ನಿಜ, ಎಲ್ಲರ ಕಾರ್ಯಕ್ಷಮತೆಯನ್ನು ಹೈಕಮಾಂಡ್‌ ಗಮನಿಸುತ್ತದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮೀಟಿಂಗ್‌ನಲ್ಲಿ ಸಚಿವರಿಗೆ ಎಚ್ಚರಿಕೆ ಕೊಡಲಾಗಿದೆ. ಮಂತ್ರಿಗಿರಿ ಕೊಟ್ಟು ಆಯಾ ಕ್ಷೇತ್ರದ ಲೋಕಸಭೆ ಅಭ್ಯರ್ಥಿ ಗೆಲ್ಲಿಸಿಕೊಂಡ ಬರದೇ ಇದ್ದರೆ ಹೇಗೆ? ಗೆಲ್ಲಿಸಿಕೊಂಡು ಬರದೇ ಹೋದರೆ ಕೊಟ್ಟ ಕುದುರೆ ಏರದವನು ಶೂರನು ಅಲ್ಲ ವೀರನು ಅಲ್ಲ ಎನ್ನುವಂತಾಗುತ್ತದೆ” ಎಂದರು

ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನ ಕಳೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದಾಗ, “ಸಮರ್ಥರಲ್ಲ ಅವರು ಅಸಮರ್ಥರು ಅಷ್ಟೇ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಸಚಿವರ ಜೊತೆಗೆ ಆಯಾ ಶಾಸಕರ ಜವಾಬ್ದಾರಿಯೂ ಆಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಸಚಿವರಾದ ಮೇಲೆ ಬಳ್ಳಾರಿ ಗೆಲ್ಲಿಸಿಕೊಂಡು ಬರುವ ಸಂಕಲ್ಪ ತೊಟ್ಟಿದ್ದೇನೆ. ಸಚಿವ ಹೇಳಿದ ಅಭ್ಯರ್ಥಿ ಫೈನಲ್ ಅಲ್ಲ, ಸ್ಥಳೀಯ ಶಾಸಕರ ಅಭಿಪ್ರಾಯ ಕಡ್ಡಾಯವಾಗಿದೆ. ನಾವು ಬಳ್ಳಾರಿ ಗೆದ್ದು ಸೋನಿಯಾ ಗಾಂಧಿಯವರಿಗೆ ಉಡುಗೊರೆಯಾಗಿ ಕೊಡುತ್ತೇವೆ ಎಂದು ಹೇಳಿದರು.

ಬಳ್ಳಾರಿಯಿಂದ ಐದು ಜನ ಟಿಕೆಟ್ ಆಕಾಂಕ್ಷಿ ಇದ್ದಾರೆ. ವೆಂಕಟೇಶ್ ಪ್ರಸಾದ್, ಮುರುಳಿ ಕೃಷ್ಣ, ಉಗ್ರಪ್ಪ, ಗುಜ್ಜಲ್ ನಾಗರಾಜ ಅರ್ಜಿ ಹಾಕಿದ್ದಾರೆ. ಆದರೆ, ನಾವು ಒಮ್ಮತ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ನಾಗೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...