ಲೋಕಸಭಾ ಚುನಾವಣೆ | ‘ಪ್ರಾಮುಖ್ಯತೆ’ ನೀಡದಿದ್ದರೆ ಬಂಗಾಳದಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ

Date:

ಲೋಕಸಭಾ ಚುನಾವಣೆಗೆ ಸ್ಥಾನ ಹಂಚಿಕೆ ಸಂಬಂಧ ‘ಇಂಡಿಯಾ’ ಒಕ್ಕೂಟದಲ್ಲಿ ತಿಕ್ಕಾಟ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌-ಟಿಎಂಸಿ-ಎಡಪಕ್ಷಗಳ ನಡುವೆ ಸೀಟು ಹಂಚಿಕೆಗಾಗಿ ವಾದ-ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆ, ತಮ್ಮ ಪಕ್ಷಕ್ಕೆ ಸರಿಯಾದ ‘ಪ್ರಾಮುಖ್ಯತೆ’ ನೀಡದಿದ್ದರೆ, ರಾಜ್ಯದ 42 ಕ್ಷೇತ್ರಗಳಲ್ಲಿಯೂ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ದವಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮುರ್ಷಿದಾಬಾದ್‌ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಬ್ಯಾನರ್ಜಿ ಮಾತನಾಡಿದ್ದಾರೆ. ತಮ್ಮ ನಿಲುವನ್ನು ಪಕ್ಷದ ಮುಖಂಡರ ಮುಂದೆ ವ್ಯಕ್ತಪಡಿಸಿದ್ದಾರೆ. ಮುರ್ಷಿದಾಬಾದ್‌ ಅಲ್ಪಸಂಖ್ಯಾತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶವಾಗಿದೆ. ಅಲ್ಲದೆ, ಕಾಂಗ್ರೆಸ್‌ನ ಭದ್ರಕೋಟೆಯೂ ಆಗಿದೆ. ಆದರೆ, 2019ರ ಚುನಾವಣೆಯಲ್ಲಿ, ಜಿಲ್ಲೆಯ ಮೂರು ಸ್ಥಾನಗಳ ಪೈಕಿ ಬಹರಂಪುರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿತ್ತು. ಉಳಿದೆರಡು ಕ್ಷೇತ್ರಗಳನ್ನು ಕಳೆದುಕೊಂಡಿತ್ತು.

ಮುರ್ಷಿದಾಬಾದ್‌ ಜಿಲ್ಲೆಯ ಎಲ್ಲ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಗೆಲುವು ಸಾಧಿಸಬೇಕಿದೆ ಎಂದು ಒತ್ತಿ ಹೇಳಿರುವ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಡಿಯಾ ಒಕ್ಕೂಟದಲ್ಲಿ ಟಿಎಂಸಿ ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ, ಬಂಗಾಳದಲ್ಲಿ ನಮ್ಮನ್ನು ಹೊರಗಿಟ್ಟು ಆರ್‌ಎಸ್‌ಪಿ, ಸಿಪಿಐ, ಸಿಪಿಐ(ಎಂ)ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ನಾವು ನಮ್ಮದೇ ಹಾದಿಯನ್ನು ರೂಪಿಸಿಕೊಳ್ಳುತ್ತೇವೆ. ರಾಜ್ಯದ ಎಲ್ಲ 42 ಸ್ಥಾನಗಳಲ್ಲಿ ಏಕಾಂಗಿಯಾಗಿ ಹೋರಾಡಲು ಮತ್ತು ಗೆಲ್ಲಲು ಸಿದ್ಧತೆಗಳನ್ನು ಮಾಡಬೇಕು,”ಎಂದು ಹಿರಿಯ ಟಿಎಂಸಿ ನಾಯಕರೊಬ್ಬರು ಹೇಳಿದ್ದಾರೆ.

ಇತ್ತೀಚೆಗೆ, ಬಂಗಾಳದಲ್ಲಿ ಕಾಂಗ್ರೆಸ್‌ 2 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡುವುದಾಗಿ ಟಿಎಂಸಿ ಹೇಳುತ್ತಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬಂಗಾಳದ ಕಾಂಗ್ರೆಸ್‌ ಘಟಕವು ಟಿಎಂಸಿ ವಿರುದ್ಧ ಕಿಡಿಕಾರುತ್ತಿದೆ. ಸ್ಥಾನಗಳಿಗಾಗಿ ಟಿಎಂಸಿ ಮುಂದೆ ಕಾಂಗ್ರೆಸ್‌ ‘ಭಿಕ್ಷೆ’ ಬೇಡುವುದಿಲ್ಲ ಎಂದು ಕಾಂಗ್ರೆಸ್‌ ಸಂಸದ ಅಧೀರ್ ಚೌಧರಿ ಹೇಳಿದ್ದಾರೆ. ಇದೆಲ್ಲವೂ, ಮುಂದಿನ ಚುನಾವಣೆಯಲ್ಲಿ ಬಂಗಾಳದಲ್ಲಿ ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್‌-ಟಿಎಂಸಿ ನಡುವೆ ಬಿರುಕು ಮೂಡುವ ಸಾಧ್ಯತೆಗಳನ್ನು ಸ್ಪಷ್ಟವಾಗಿ ತೋರಿಸುತ್ತಿವೆ.

ಈ ಸುದ್ದಿ ಓದಿದ್ದೀರಾ?: ಪ್ರಚಾರಕ್ಕಾಗಿ ಕಚ್ಚಾಟ | ಮೋದಿ ಚಿತ್ರ ಹಾಕಿಲ್ಲವೆಂದು ಬಂಗಾಳಕ್ಕೆ ಅನುದಾನ ತಡೆದ ಕೇಂದ್ರ

ಈ ನಡುವೆ, ಕಳೆದ ವಾರ ‘ಇಂಡಿಯಾ’ ಒಕ್ಕೂಟ ನಡೆಸಿದ ವರ್ಚವಲ್ ಸಭೆಯಿಂದ ಟಿಎಂಸಿ ದೂರ ಉಳಿದಿತ್ತು. ಬಂಗಾಳದಲ್ಲಿ ಕಾಂಗ್ರೆಸ್‌ ತನ್ನ ಮಿತಿಗಳನ್ನು ಗುರುತಿಸಿಕೊಳ್ಳಬೇಕು. ರಾಜ್ಯದಲ್ಲಿ ರಾಜಕೀಯ ಸಂಘರ್ಷವನ್ನು ಮುನ್ನಡೆಸಲು ಆಡಳಿತಾರೂಢ ಟಿಎಂಸಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಒತ್ತಿಹೇಳಿತ್ತು.

2019 ರ ಚುನಾವಣೆಯಲ್ಲಿ, ರಾಜ್ಯದಲ್ಲಿ ಟಿಎಂಸಿ 22 ಸ್ಥಾನಗಳನ್ನು ಪಡೆದುಕೊಂಡಿತು, ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿತು ಹಾಗೂ ಬಿಜೆಪಿ 18 ಸ್ಥಾನಗಳನ್ನು ವಶಪಡಿಸಿಕೊಂಡಿತ್ತು.

ತೃಣಮೂಲ ಕಾಂಗ್ರೆಸ್ ಈ ಹಿಂದೆ 2001ರ ವಿಧಾನಸಭಾ ಚುನಾವಣೆ, 2009ರ ಲೋಕಸಭೆ ಚುನಾವಣೆ ಮತ್ತು 2011ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿಯು 34 ವರ್ಷಗಳ ಸಿಪಿಐ(ಎಂಒ) ನೇತೃತ್ವದ ಎಡರಂಗದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...