ಲೋಕಸಭೆ ಚುನಾವಣೆ | ಅಭ್ಯರ್ಥಿಗಳ ಆಯ್ಕೆ ವರದಿ ತೃಪ್ತಿ ತಂದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಇಂದಿರಾಭವನದಲ್ಲಿ ನಡೆದ ಪಕ್ಷದ ಸಭೆಯ ನಂತರ ನಂತರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. ನಾಲ್ಕು ಗ್ಯಾರಂಟಿ ಜನರನ್ನು ತಲುಪಿದ್ದು, ಐದನೇ ಗ್ಯಾರಂಟಿ ಯುವನಿಧಿಗೆ ಇದೇ 12 ರಂದು ವಿವೇಕಾನಂದರ ಜಯಂತಿ ದಿನ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ” ಎಂದರು.

“ಇದೇ 21 ರಂದು ರಾಜ್ಯದ ಕಾರ್ಯಕರ್ತರ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಶಾಸಕರು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು, ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದವರು, ಸೋತವರು, ಬೂತ್ ಮಟ್ಟದ ಪ್ರತಿನಿಧಿಗಳನ್ನು ಸೇರಿಸಿ ಈ ಸಮಾವೇಶ ಮಾಡಲು ತಿಳಿಸಿದ್ದು, ಕಾರ್ಯಕ್ರಮ ಸ್ಥಳದ ಬಗ್ಗೆ ಎರಡು ದಿನಗಳಲ್ಲಿ ತಿಳಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ ಚುನಾವಣೆ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಓರ್ವ ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ. ಅವರ ಕೈಕೆಳಗೆ ಉಪಾಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನಿಯೋಜಿಸಿದ್ದೇವೆ. ಬ್ಲಾಕ್ ಮಟ್ಟದಲ್ಲಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ, ಬಿಎಲ್ಎಗಳ ನೇಮಕ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಸಂಘಟನೆಗಳು, ಬ್ಲಾಕ್ ಮಟ್ಟದಲ್ಲಿ ಬದಲಾವಣೆ ಮಾಡಿ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಜನಾದೇಶದ ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬಂದು ಹಣ ತಿನ್ನುವ ರುಚಿ ಬಿಜೆಪಿಗೆ ಹತ್ತಿದೆ: ಸಿದ್ದರಾಮಯ್ಯ ಕಿಡಿ

“ಫೆ.12 ರಂದು ವಿಧಾನಮಂಡಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ತಿಂಗಳ 12ರ ಒಳಗಾಗಿ ಈ ಸಮಾವೇಶಗಳನ್ನು ನಡೆಸಬೇಕಿದೆ. ಜಿಲ್ಲಾ ಮಂತ್ರಿಗಳು ಈ ಸಮಾವೇಶಗಳ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದರು.

“ಮನೆ, ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮವನ್ನು ರೂಪಿಸುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ. ಇನ್ನು ಕಾರ್ಯಕರ್ತರಿಗೆ ಶಕ್ತಿ ತುಂಬಲು ನಿಗಮ ಮಂಡಳಿಗಳ ನೇಮಕದ ಮೊದಲ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಈ ಹುದ್ದೆಗಳ ಕಾಲವಧಿ 2 ವರ್ಷ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಈ ಕಾಲಮಿತಿ ಮಾಡಿದ್ದೇವೆ” ಎಂದು ಹೇಳಿದರು.

“ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ಬಗ್ಗೆ ಎಐಸಿಸಿ ನಾಯಕರು ನಮಗೆ ಅಜೆಂಡಾ ನಿಗದಿ ಮಾಡಿದ್ದಾರೆ. 28 ಕ್ಷೇತ್ರಗಳಿಗೆ ಮಂತ್ರಿಗಳನ್ನು ಉಸ್ತುವಾರಿಯಾಗಿ ನೇಮಕ ಮಾಡಿದ್ದು, ನಾಳೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಲ್ಕು ರಾಜ್ಯಗಳ ಸಚಿವರುಗಳ ಸಭೆ ಕರೆಯಲಾಗಿದೆ. ಅಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ತಿಳಿಸುತ್ತಾರೆ” ಎಂದರು.

“ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ನನಗೆ ಬಂದಿರುವ ವರದಿಗಳು ತೃಪ್ತಿಕರವಾಗಿಲ್ಲ. ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಗಳು, ನಾನು ಹಾಗೂ ಎಐಸಿಸಿ ಸಮೀಕ್ಷೆ ನಡೆಸುತ್ತಿದ್ದೇವೆ. ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ನಾವು ಚರ್ಚೆ ಮಾಡಿದ್ದು, ಅದನ್ನು ಕಾರ್ಯಕರ್ತರ ಕೈಯಲ್ಲಿ ಹಂಚಿಕೆ ಮಾಡಿಸಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...