ಲೋಕಸಭೆ ಚುನಾವಣೆ| ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

Date:

ಬಿಜೆಪಿ ಭಾನುವಾರ (ಏಪ್ರಿಲ್ 14) ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆ ಅಥವಾ ‘ಸಂಕಲ್ಪ ಪತ್ರ’ವನ್ನು ‘ಮೋದಿ ಕಿ ಗ್ಯಾರಂಟಿ’ ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನವದೆಹಲಿಯಲ್ಲಿನ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ.

2024ರ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ 27 ಸದಸ್ಯರ ಪ್ರಣಾಳಿಕೆ ಸಮಿತಿಯನ್ನು ಬಿಜೆಪಿ ನೇಮಿಸಿತ್ತು. ಈ ಸಮಿತಿಯು ಜನರ ಅಭಿಪ್ರಾಯವನ್ನು ಸಂಗ್ರಹಿಸಿ, ಎರಡು ಬಾರಿ ಸಭೆ ನಡೆಸಿ ಈಗ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಇಡೀ ದೇಶವೇ ಬಿಜೆಪಿಯ ‘ಸಂಕಲ್ಪ ಪತ್ರ’ಕ್ಕಾಗಿ ಕಾಯುತ್ತಿದೆ. 10 ವರ್ಷಗಳಲ್ಲಿ ನಮ್ಮ ಪಕ್ಷ ತನ್ನ ಭರವಸೆ ಈಡೇರಿಸಿದೆ. 60,000 ಹೊಸ ಗ್ರಾಮಗಳಿಗೆ ಪಕ್ಕಾ ರಸ್ತೆಗಳ ಸಂಪರ್ಕ ಕಲ್ಪಿಸುವ ಕೆಲಸ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಣಾಳಿಕೆಯು ವೀಕ್ಷಿತ ಭಾರತದ ನಾಲ್ಕು ಸ್ತಂಭಗಳಾದ ಮಹಿಳಾ ಶಕ್ತಿ, ಯುವ ಶಕ್ತಿ, ರೈತರು ಮತ್ತು ಬಡವರ ಮೇಲೆ ಕೇಂದ್ರೀಕರಿಸಿದೆ. ಇದು ಜೀವನದ ಘನತೆ ಮತ್ತು ಜೀವನದ ಗುಣಮಟ್ಟ, ಅವಕಾಶದ ಪ್ರಮಾಣ ಮತ್ತು ಅವಕಾಶದ ಗುಣಮಟ್ಟದ ಮೇಲೆ ಕೇಂದ್ರಿಕರಿಸಿದೆ. ಎಲ್ಲಾ ಮನೆಗಳಿಗೆ ಪೈಪ್ಡ್ ಗ್ಯಾಸ್ (ಅನಿಲ ಕೊಳವೆ ಮಾರ್ಗ) ಮತ್ತು ಸೌರಶಕ್ತಿಯ ಮೂಲಕ ಉಚಿತ ವಿದ್ಯುತ್ ಒದಗಿಸಲು ರ್ಕಾರ ಗಮನಹರಿಸಲಿದೆ” ಎಂದು ಪ್ರಧಾನಿ ಮೋದಿ ತಿಳಿಸಿದರು.

ಇದನ್ನು ಓದಿದ್ದೀರಾ?  ನ್ಯಾಯ ಸಂಕಲ್ಪ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ: ಇಂಡಿಯಾ ಒಕ್ಕೂಟದ ನಾಯಕರು ಭಾಗಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ಕಾರ್ಯಗಳ ಪ್ರಸ್ತಾಪ ಮಾಡಿದರು. “ಹಳ್ಳಿಗಳು ಸಬಲೀಕರಣಗೊಳ್ಳುತ್ತವೆ ಅಥವಾ ಆಪ್ಟಿಕಲ್ ಫೈಬರ್ ಹಳ್ಳಿಗಳನ್ನು ತಲುಪುತ್ತದೆ ಎಂದು ನಾವು ಎಂದಿಗೂ ಊಹಿಸಿರಲಿಲ್ಲ. ಆದರೆ ಇಂದು ನಿಮ್ಮ ನಾಯಕತ್ವದಲ್ಲಿ 1.2 ಲಕ್ಷ ಪಂಚಾಯತ್‌ಗಳನ್ನು ಆಪ್ಟಿಕಲ್ ಫೈಬರ್‌ನ ಸಂಪರ್ಕವಿದೆ. ಇಂಟರ್ನೆಟ್ ಸೌಲಭ್ಯವಿದೆ ಎಂಬುವುದು ನನಗೆ ಸಂತೋಷವಾಗಿದೆ” ಎಂದು ತಿಳಿಸಿದರು.

“ನಮ್ಮ ಅಧಿಕಾರವಧಿಯಲ್ಲಿ ಭಾರತದ ಜನಸಂಖ್ಯೆಯ 25 ಕೋಟಿ ಜನರು ಈಗ ಬಡತನ ರೇಖೆಯಿಂದ ಮೇಲಕ್ಕೆ ಏರಿದ್ದಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ ಪ್ರಕಾರ, ಭಾರತದಲ್ಲಿ ತೀವ್ರ ಬಡತನವು ಈಗ ಶೇಕಡ 1ಕ್ಕಿಂತ ಕಡಿಮೆಯಿದೆ” ಎಂದೂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...