ಅಕ್ರಮ ಆಸ್ತಿ ಗಳಿಕೆ ಆರೋಪ, ಆರು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಆರು ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಹೊಂದಿ ಅಧಿಕಾರಿಗಳಿ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟಿಕಲ್) ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ ಮನೆ, ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆ ಮೇಲೂ ದಾಳಿ ನಡೆದಿದೆ.

ಯಾವೆಲ್ಲ ಅಧಿಕಾರಿಗಳ ಮನೆ ಮೇಲೆ ದಾಳಿ 

  • ಲೋಕೇಶ್ ಬಾಬು, ಬೆಸ್ಕಾಂ ಇಂಜಿಯರ್, ಬೆಂಗಳೂರಿನ ಬಣಸವಾಡಿ ನಿವಾಸಿ.
  • ಸುರೇಶ್ ಬಾಬು ಕಂದಾಯ ಇಲಾಖೆ ಇನ್ಸ್​ಪೆಕ್ಟರ್ ಬೆಂಗಳೂರು ನಿವಾಸ.
  • ಕೃಷ್ಣಪ್ಪ ಬಿಬಿಎಂಪಿ ತೆರಿಗೆ ಇನ್ಸ್​ಪೆಕ್ಟರ್, ಬೆಂಗಳೂರು ನಿವಾಸ.
  • ಸುನೀಲ್ ಕುಮಾರ್ ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ.
  • ನಂಜುಡಯ್ಯ, ಶಸಸ್ತ್ರ ಡಿವೈಎಸ್​ಪಿ, ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ.
  • ಲಕ್ಷ್ಮಣ್ ಎಸ್​ಡಿಎ, ಗದಗ.
  • ರಾಮಪ್ಪ, ಕಲಬುರುಗಿ ಮಹಾನಗರ ಪಾಲಿಕೆ ಇಂಜಿನಿಯರ್.
  • ರಮೇಶ್, ಅಬಾಕಾರಿ ಇನ್ಸ್ ಪೆಕ್ಟರ್ ರಾಯಚೂರು.
  • ಸುರೇಶ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ.
  • ಸುನೀಲ್ ಬಿಹೆಚ್ಒ, ಬೆಂಗಳೂರು ಗ್ರಾಮಾಂತರ.

ಚಿತ್ರದುರ್ಗದಲ್ಲೂ ಲೋಕಾಯುಕ್ತ ದಾಳಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಅರಣ್ಯ ಇಲಾಖೆ ACF ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಠಲ್ ನಗರದಲ್ಲಿರುವ ಹಿರಿಯೂರು ಉಪ ವಿಭಾಗದ ACF ಸುರೇಶ್ ಮನೆ ಸೇರಿ 4 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಳ್ಳಕೆರೆ ನಿವಾಸ, ಹೊಸ ಬ್ಯಾಡರಹಟ್ಟಿ ಮನೆ, ಬೆಂಗಳೂರು ನಿವಾಸ, ಹಿರಿಯೂರು ಕಚೇರಿ ಮೇಲೆ ದಾಳಿ ಮಾಡಿ ನಾಲ್ಕು ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...