ಬಂಗಾಳದಲ್ಲಿ ಬಿಜೆಪಿಗೆ ಭಾರೀ ಮುಖಭಂಗ; ಟಿಎಂಸಿ 31 ಸ್ಥಾನಗಳಲ್ಲಿ ಮುನ್ನಡೆ

Date:

ಸಂದೇಶ್‌ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್‌ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) 30ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಪಶ್ಚಿಮ ಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಟಿಎಂಸಿ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಕೇವಲ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್‌ 1 ಸ್ಥಾನದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಟಿಎಂಸಿ ಇಂದ ಸ್ಪರ್ಧಿಸಿದ್ದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಕಾಂಗ್ರೆಸ್‌ನ ಅಧೀರ್ ಚೌಧರಿ ವಿರುದ್ಧ 3,000 ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ 3.14 ಲಕ್ಷಕ್ಕೂ ಹೆಚ್ಚು ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕೃಷ್ಣಾನಗರದಲ್ಲಿ ಸಂಸತ್‌ನಲ್ಲಿ ಉಚ್ಚಾಟನೆಗೊಂಡಿದ್ದ ಟಿಎಂಸಿಯ ಮಹುವಾ ಮೊಯಿತ್ರಾ ಭಾರೀ ಮುನ್ನಡೆಯಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...