ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ

Date:

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು.

ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಲಾಗಿತ್ತು. ಈ ಘಟನೆಗೆ ಪ್ರತಿಭಟನೆ ವ್ಯಕ್ತಪಡಿಸಿ ‘ಇಂಡಿಯಾ’ ಒಕ್ಕೂಟದ ಸದಸ್ಯರು ಸಭಾತ್ಯಾಗ ಮಾಡಿದರು” ಎಂದು ತಿಳಿಸಿದ್ದಾರೆ.

ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪಡೆಯಲು ‘ಇಂಡಿಯಾ’ ಒಕ್ಕೂಟ ಮಂಡಿಸಿದ ಬೇಡಿಕೆಯನ್ನು ತಡೆಯಲು ಬಿಜೆಪಿ ಸಂಸದರು ಖರ್ಗೆ ಅವರ ಮೈಕ್ರೋಫೋನ್‌ ಅನ್ನು ಸ್ವಿಚ್ಡ್ ಆಫ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಮಿಸ್ಟರ್‌ ಮೋದಿ, ನಮ್ಮನ್ನು ಏನೆಂದು ಕರೆದರೂ ಮಣಿಪುರದಲ್ಲಿ ಶಾಂತಿ ಮರಳಿಸುತ್ತೇವೆ’: ಪ್ರಧಾನಿಗೆ ರಾಹುಲ್‌ ತಿರುಗೇಟು

ಬಿಜೆಪಿ ಸದಸ್ಯರ ಪ್ರಚೋದನೆಯಿಂದ ಸ್ವತಃ ಸಭಾನಾಯಕರೇ ಪದೇ ಪದೇ ಅಡ್ಡಿಪಡಿಸಿದರು. ಗದ್ದಲದಲ್ಲಿಯೇ ಮಸೂದೆಗಳನ್ನು ಮಂಡಿಸಲಾಯಿತು. ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಇಂಡಿಯಾ’ ಸದಸ್ಯರು ಸಭಾತ್ಯಾಗ ಮಾಡಿದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಣಿಪುರ ಹಿಂಸಾಚಾರದ ಬಗ್ಗೆ ವಿವರವಾದ ಚರ್ಚೆಗೆ ಮತ್ತು ಈಶಾನ್ಯ ರಾಜ್ಯದ ಸಮಸ್ಯೆಯ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...