ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

Date:

18ನೇ ಲೋಕಸಭೆಯಲ್ಲಿ ಮೊದಲ ಭಾಷಣ ಮಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಶಿವ, ಗುರುನಾನಕ್, ಬುದ್ಧ, ಜೀಸಸ್, ಮಹಾವೀರ, ಇಸ್ಲಾಂ ಧರ್ಮದ ಸಂದೇಶಗಳನ್ನು ತೋರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ‘ಜೈ ಸಂವಿಧಾನ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೇರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದೇಶದಲ್ಲಿ 24 ಗಂಟೆಯು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಬಿಜೆಪಿಯವರ ಪ್ರಕಾರ ನರೇಂದ್ರ ಮೋದಿ ಎಂದರೆ ಹಿಂದೂ ಧರ್ಮ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವ ಏನೆಂದರೆ, ನರೇಂದ್ರ ಮೋದಿ ಇಡೀ ಹಿಂದೂ ಸಮಾಜವಲ್ಲ. ಬಿಜೆಪಿ ಎಂದರೆ ಇಡೀ ಹಿಂದೂ ಸಮಾಜವಲ್ಲ. ಆರ್‌ಎಸ್‌ಎಸ್ ಇಡೀ ಹಿಂದೂ ಸಮಾಜವಲ್ಲ. ಹಿಂದೂ ಧರ್ಮ ಇದು ಬಿಜೆಪಿಯ ಸ್ವತ್ತಲ್ಲ. ಬಿಜೆಪಿಯವರು ಹಿಂಸಾಚಾರಿ ಹಿಂದೂಗಳು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಆಕ್ಷೇಪ ವ್ಯಕ್ತಪಡಿಸಲು ಎದ್ದು ನಿಂತ ಪ್ರಧಾನಿ ನರೇಂದ್ರ ಮೋದಿ, “ಇಡೀ ಹಿಂದೂ ಸಮಾಜವನ್ನು ಹಿಂಸಾಚಾರಿಗಳು ಎಂದು ಕರೆಯುವುದು ಅಸಹ್ಯಕರ” ಎಂದು ಆಕ್ಷೇಪ ಎತ್ತಿದರು. ಅಲ್ಲದೇ, ಬಿಜೆಪಿ ನಾಯಕರು ರಾಹುಲ್ ಗಾಂಧಿ ಭಾಷಣಕ್ಕೆ ಅಡ್ಡಿಪಡಿಸಿದರು.

ಪ್ರಧಾನಿ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಸೇರಿದಂತೆ ಆಡಳಿತ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ರಾಹುಲ್‌ ಗಾಂಧಿ, “ಆರ್‌ಎಸ್‌ಎಸ್‌ ಹಿಂದೂ ಸಮಾಜವನ್ನು ಗುತ್ತಿಗೆ ಪಡೆದಿಲ್ಲ. ರಾಮಜನ್ಮಭೂಮಿಯಲ್ಲಿ ಬಿಜೆಪಿಗೆ ಸೋಲಾಗಿದೆ” ಎಂದು ಹೇಳಿದರು.

 

ದೇವರುಗಳ ಫೋಟೋದಲ್ಲಿದ್ದ ‘ಅಭಯ ಮುದ್ರ'(ಹಸ್ತ) ಸಂಕೇತವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ಅಭಯಮುದ್ರವು ಕಾಂಗ್ರೆಸ್‌ನ ಸಂಕೇತವಾಗಿದೆ. ಅಭಯಮುದ್ರವು ನಿರ್ಭಯತೆಯ ಸಂಕೇತವಾಗಿದೆ, ಧೈರ್ಯ ಮತ್ತು ಸುರಕ್ಷತೆಯ ಸಂಕೇತವಾಗಿದೆ. ಇದು ಭಯವನ್ನು ಹೋಗಲಾಡಿಸುತ್ತದೆ ಮತ್ತು ಹಿಂದೂ ಧರ್ಮ, ಇಸ್ಲಾಂ ಧರ್ಮದಲ್ಲಿ ದೈವಿಕ ರಕ್ಷಣೆ ಮತ್ತು ಆನಂದವನ್ನು ನೀಡುತ್ತದೆ. ಸಿಖ್ ಧರ್ಮ, ಬೌದ್ಧ ಧರ್ಮ ಮತ್ತು ಇತರ ಭಾರತೀಯ ಧರ್ಮಗಳು, ನಮ್ಮ ಮಹಾಪುರುಷರೆಲ್ಲರೂ ಅಹಿಂಸೆ ಮತ್ತು ಭಯವನ್ನು ಹೋಗಲಾಡಿಸುವ ಬಗ್ಗೆ ಮಾತನಾಡಿದ್ದಾರೆ. ಆದರೆ, ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವ ಬಿಜೆಪಿಯವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

“ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ದಿನ ಅದಾನಿ ಅಂಬಾನಿಯವರನ್ನು ಆಮಂತ್ರಿಸಲಾಗಿತ್ತು. ಆದರೆ, ಅಲ್ಲಿನ ಸ್ಥಳೀಯ ಜನರನ್ನು ದೂರವಿಡಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿಗೆ ಸೂಕ್ತ ಪಾಠ ಕಲಿಸಿದ್ದಾರೆ” ಎಂದು ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...