ಪ್ರೇಮ ಪ್ರಕರಣ | ಮುಸ್ಲಿಂ ಯುವಕನನ್ನು ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಕೊಲೆ

Date:

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ.

ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ ಮಾಸುವ ಮುನ್ನವೇ ಪಕ್ಕದ ಜಿಲ್ಲೆ ಬೆಳಗಾವಿಯಲ್ಲೂ ಗುರುವಾರ ಪ್ರೀತಿ ವಿಚಾರವಾಗಿ ಮುಸ್ಲಿಂ ಯುವಕನ ಬರ್ಬರ ಕೊಲೆಯಾಗಿದೆ.

ಪ್ರೀತಿಯ ವಿಚಾರಕ್ಕೆ ಬೆಳಗಾವಿ ನಗರದಲ್ಲಿ ಹಾಡ ಹಗಲೇ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಯುವಕನ ಕೊಲೆ ಮಾಡಲಾಗಿದೆ. ಈ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರೀಡ್ಜ್ ಬಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಗಾಂಧಿ ನಗರದ ಯುವತಿಯ ಜೊತೆಗೆ ಇಬ್ರಾಹಿಂ ಪ್ರೀತಿ ಮಾಡುತ್ತಿದ್ದ ಎನ್ನಲಾಗಿದ್ದು, ಇವತ್ತು (ಮೇ16) ಯುವತಿ ಜೊತೆಗೆ ಬೈಕ್ ನಲ್ಲಿ ಹೊರಟ್ಟಿದ್ದ ಇಬ್ರಾಹಿಂನನ್ನು ನೋಡಿದ ಯುವತಿಯ ಸಹೋದರ ಸಿಟ್ಟಿನಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದ ಇಬ್ರಾಹಿಂನನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಮುಜಮಿಲ್ ಸತ್ತಿಗೇರಿ ಹತ್ಯೆ ಮಾಡಿದ ಆರೋಪಿ. ಹತ್ಯೆಯಾದ ಇಬ್ರಾಹಿಂಗೂ ಅದೇ ಬಡಾವಣೆಯ ಮುಜಮಿಲ್ ಸತ್ತಿಗೇರಿ ಎಂಬುವವನ ಸಹೋದರಿ ಪರಸ್ಪರ ಪ್ರೀತಿಸುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಈ ಮೊದಲು ಜಗಳವಾಗಿದೆ. ಇಬ್ರಾಹಿಂ ಈ ಹಿಂದೆ ವಾರ್ನಿಂಗ್ ಕೊಟ್ಟಿದ್ದ ಎನ್ನಲಾಗಿದೆ. ಕೊಲೆ ಆರೋಪಿ ಮತ್ತು ಮೃತ ಯುವಕ ಇಬ್ಬರೂ ಒಂದೇ ಸಮುದಾಯದವರಾಗಿದ್ದಾರೆ.

ಗುರುವಾರ ಸಹೋದರಿಯೊಂದಿಗೆ ಬೈಕ್‌ನಲ್ಲಿ ಹೊರಟಿದ್ದನ್ನು ನೋಡಿ ಇಬ್ರಾಹಿಂನ ಬೆನ್ನಟ್ಟಿ ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಹತ್ಯೆ ಮಾಡಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...