ನಮ್ಮ ರೈತರನ್ನು ಬಂಧಿಸಿರುವ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮಿದುಳು ಮೋದಿ : ಸಿದ್ದರಾಮಯ್ಯ ಕಿಡಿ

Date:

“ದೆಹಲಿಯಲ್ಲಿ ನಾಳೆ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು” ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮಿದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

“ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು” ಎಂದು ನೆನಪಿಸಿದ್ದಾರೆ.

“ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...