ಮಧ್ಯಪ್ರದೇಶ | ಬಿಜೆಪಿ ನಾಯಕ ಶ್ಯಾಮ್‌ ಲಾಲ್ ಧಕಾಡ್ ಹತ್ಯೆ

Date:

ಮಧ್ಯಪ್ರದೇಶದ ಪಶ್ಚಿಮ ಮಂದ್ಸೌರ್ ಜಿಲ್ಲೆಯ ಬಿಜೆಪಿ ನಾಯಕ ಶ್ಯಾಮ್‌ ಲಾಲ್ ಧಕಾಡ್(45) ಹತ್ಯೆ ನಡೆದಿದೆ. ಬಿಜೆಪಿ ನಾಯಕ ತಮ್ಮ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ತಮ್ಮ ಒಂದು ಅಂತಸ್ತಿನ ಮನೆಯ ಟೆರೇಸ್‌ನಲ್ಲಿದ್ದ ಕೋಣೆಯಲ್ಲಿ ಮಲಗಿದ್ದ ಬಿಜೆಪಿ ನಾಯಕನ ಹತ್ಯೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 9 ಗಂಟೆಗೆ ಚಹಾ ನೀಡಲು ಎಬ್ಬಿಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ತಲೆಯಿಂದ ತೀವ್ರವಾಗಿ ರಕ್ತಸ್ರಾವಾಗಿತ್ತು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ನವರಾತ್ರಿ | ಮಧ್ಯಪ್ರದೇಶದ ಪಟ್ಟಣದಲ್ಲಿ ಮಾಂಸಾಹಾರ ನಿಷೇಧ; ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ಯಾಮ್‌ ಲಾಲ್ ಧಕಾಡ್ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಾಲ್ಕು ಬಾರಿ ಶಾಸಕರಾದ ಜಗದೀಶ್ ದೇವ್ಡಾ ಅವರ ಮಾಲ್‌ಹಗಢ ವಿಧಾನಸಭೆ ಕ್ಷೇತ್ರದ ಬಿಜೆಪಿಯ ಬುದ್ಧ ಮಂಡಲ್‌ನ ಉಪಾಧ್ಯಕ್ಷರಾಗಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಮಂದ್ಸೌರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಆನಂದ್, “ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಬೇಕಿದೆ. ಪ್ರಾಥಮಿಕ ತನಿಖೆಯಿಂದ ಧಕಾಡ್ ಅವರ ತಲೆಗೆ ಹರಿತವಾದ ಆಯುಧದಿಂದ ಪದೇ ಪದೇ ಹಲ್ಲೆ ನಡೆಸಿರುವಂತಿದೆ. ತಲೆಯಲ್ಲಿ ಹಲವು ಗಾಯಗಳಿವೆ. ಇದರಿಂದಾಗಿ ಸಾವನ್ನಪ್ಪಿದ್ದಾರೆ” ಎಂದು ಹೇಳಿದ್ದಾರೆ.

“ಧಕಾಡ್ ಪ್ರತಿದಿನ ಮೊದಲ ಮಹಡಿಯ ಟೆರೇಸ್‌ನಲ್ಲಿ ನಿರ್ಮಿಸಲಾದ ಕೋಣೆಯಲ್ಲಿ ಮಲಗುತ್ತಿದ್ದರು. ಅದೇ ಕೋಣೆಯಲ್ಲಿ ಕೊಲೆ ಮಾಡಲಾಗಿದೆ. ಮನೆಯ ಆವರಣದಲ್ಲಿ ಧಕಾಡ್ ಕುಟುಂಬಸ್ಥರು ಶೆಡ್ ಅನ್ನು ನಿರ್ಮಿಸಿದ್ದರು. ಹತ್ಯೆ ಮಾಡಿದವರು ಆ ಶೆಡ್ ಮೂಲಕವೇ ಧಕಾಡ್ ಕೋಣೆಗೆ ಹೋಗಿರಬಹುದು” ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ತನಿಖೆಗಾಗಿ ಪೊಲೀಸರು ತಂಡವನ್ನು ರಚಿಸಿದ್ದಾರೆ.

ಧಕಾಡ್ 2021ರಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದು, ಸದ್ಯ ಮಾಲ್‌ಹಗಢ ವಿಧಾನಸಭಾ ಕ್ಷೇತ್ರದ ನಹರ್ಗಡ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜೆಪಿಯ ಬುದ್ಧ ಮಂಡಲದ ಉಪಾಧ್ಯಕ್ಷರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...