18 ಬಾರಿ ಸೋಲು; ಮತ್ತೆ ಚುನಾವಣಾ ಕಣಕ್ಕಿಳಿದ ಸೋಲಿನ ಸರದಾರ

Date:

ಕಳೆದ 35 ವರ್ಷಗಳಲ್ಲಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿ ಬರೋಬ್ಬರಿ 18 ಬಾರಿ ಸೋಲುಂಡಿರುವ ವ್ಯಕ್ತಿಯೊಬ್ಬರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶದ ಇಂಧೋರ್‌-4 ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಇಂಧೋರ್ ನಿವಾಸಿ, 63 ವರ್ಷದ ಪರಮಾನಂದ ಟೋಲಾನಿ ಅವರು 18 ಬಾರಿ ಸೋಲು ಕಂಡರೂ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ರಿಯಲ್‌ ಎಸ್ಟೇಟ್ ಉದ್ಯಮಿ ಆಗಿರುವ ಅವರು 18 ಬಾರಿಯೂ ಠೇವಣಿ ಕಳೆದುಕೊಂಡಿದ್ದಾರೆ. ತಮ್ಮ ಸೋಲುಗಳಿಂದಲೇ ‘ಇಂಧೋರ್ ಧರ್ತಿ ಪಕಡ್’ ಎಂಬ ಹೆಸರು ಪಡೆದಿದ್ದಾರೆ. ಇದೀಗ ಅವರು 19ನೇ ಬಾರಿಗೆ ಸ್ಪತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಅವರ ಕುಟುಂಬ ರಾಜಕೀಯೇತರ ಹಿನ್ನೆಲೆಯಿಂದ ಬಂದಿದ್ದು, ಕಳೆದ ಎರಡು ತಲೆಮಾರುಗಳಿಂದ ಚುನಾವಣೆಗೆ ಸ್ಪರ್ಧಿಸಿ ಹೆಸರುವಾಸಿಯಾಗಿದೆ. ಆದರೆ, ಅವರ ಕುಟುಂಬದ ಯಾವುದೇ ಸದಸ್ಯರು ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ. ಬದಲಿಗೆ, ಆ ಕುಟುಂಬದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲರೂ ತಮ್ಮ ಭದ್ರತಾ ಠೇವಣಿ ಕಳೆದುಕೊಂಡಿದ್ದಾರೆ. ಅವರ ತಂದೆ ಕೂಡ 30 ವರ್ಷಗಳ ಕಾಲ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ನಾಮಪತ್ರ ಸಲ್ಲಿಸಿರುವ ಟೋಲಾನಿ, “ಇದು ನನ್ನ 19ನೇ ಚುನಾವಣೆ. ಇದಕ್ಕೂ ಮುನ್ನ ಲೋಕಸಭೆ, ವಿಧಾನಸಭೆ, ಮೇಯರ್ ಸ್ಥಾನ ಸೇರಿದಂತೆ 18 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಒಮ್ಮೆ ಮೇಯರ್‌ ಸ್ಥಾನ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದರಿಂದ ಪತ್ನಿ ಲಕ್ಷ್ಮಿ ಟೋಲಾನಿ ಅವರನ್ನು ಮೇಯರ್‌ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದೆ” ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಪ್ರತಿ ಬಾರಿಯೂ ಚುನಾವಣಾ ಆಯೋಗವು ತಮ್ಮ ಭದ್ರತಾ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬೇಕಾದರೂ, ಚುನಾವಣೆಯಲ್ಲಿ ಸ್ಪರ್ಧಿಸುವ ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ” ಎಂದು ಟೋಲಾನಿ ಹೇಳಿದ್ದಾರೆ.

“ಇಂದೋರ್‌ನ ಜನರು ತುಂಬಾ ಬುದ್ಧಿವಂತರು. ಅವರು ಖಂಡಿತವಾಗಿಯೂ ನನ್ನನ್ನು ಎಂದಾದರೂ ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಜೆಪಿ-ಜೆಡಿಎಸ್‌ ಮೈತ್ರಿ | ನಾವು ಸ್ವತಂತ್ರವಾಗಿರುತ್ತೇವೆ ಎಂದ ಕೇರಳ ಜೆಡಿಎಸ್

ಚುನಾವಣೆಯಲ್ಲಿ ಗೆದ್ದರೆ, 1,000 ಚದರ ಅಡಿ ವಿಸ್ತೀರ್ಣದ ಕಟ್ಟಡಗಳ ಆಸ್ತಿ ತೆರಿಗೆಯಿಂದ ಜನರಿಗೆ ಸಂಪೂರ್ಣ ವಿನಾಯತಿ ನೀಡುತ್ತೇನೆ. ಮನೆ-ಮನೆ ಕಸ ಸಂಗ್ರಹ ಮಾಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

“ಇಂಧೋರ್‌ನಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ನನ್ನ ತಂದೆ ಮೆಥಾರಾಮ್ ಟೋಲಾನಿ ಅವರು ತಮ್ಮ ಜೀವಿತಾವಧಿಯಲ್ಲಿ 30 ವರ್ಷಗಳ ಕಾಲ ನಿರಂತರವಾಗಿ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. 1988ರಲ್ಲಿ ನನ್ನ ತಂದೆಯ ನಿಧನದ ನಂತರ ನಾನು 1989ರಿಂದ ಚುನಾವಣೆಗೆ ಸ್ಪರ್ಧಿಸಲು ಆರಂಭಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...