ನಿರುದ್ಯೋಗಿಗಳಿಗೆ ‘ಆಕಾಂಕ್ಷಿ ಯುವಕರು’ ಎಂದು ಹಣೆಪಟ್ಟಿ ನೀಡಿದ ಮಧ್ಯಪ್ರದೇಶ ಸರ್ಕಾರ; ತೀವ್ರ ಖಂಡನೆ

Date:

ನಿರುದ್ಯೋಗಿ ಯುವಕರಿಗೆ ‘ಆಕಾಂಕ್ಷಿ ಯುವಕರು’ (ಆಕಾಂಶಿ ಯುವ) ಎಂದು ಮಧ್ಯಪ್ರದೇಶ ಸರ್ಕಾರವು ಹಣೆಪಟ್ಟಿ ನೀಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಇದನ್ನು ಟೀಕಿಸಿದೆ. “ಇದು ನಿರುದ್ಯೋಗಿಗಳನ್ನು ಅಣಕಿಸಿದಂತಿದೆ” ಎಂದು ಆರೋಪಿಸಿದೆ.

ರಾಜ್ಯದ ರೋಜ್‌ಗರ್ ಪೋರ್ಟಲ್‌ನಲ್ಲಿ ಮಧ್ಯಪ್ರದೇಶದಲ್ಲಿರುವ ನಿರುದ್ಯೋಗಿ ಯುವಕರ ಸಂಖ್ಯೆಯನ್ನು ಪಟ್ಟಿ ಮಾಡಲಾಗಿದೆ. ಆದರೆ ನಿರುದ್ಯೋಗಿಗಳು ಎಂದು ಉಲ್ಲೇಖಿಸುವ ಬದಲಾಗಿ ‘ಆಕಾಂಶಿ ಯುವ’ (ಉದ್ಯೋಗ ಆಕಾಂಕ್ಷೆ ಹೊಂದಿರುವ ಯುವಕರು) ಎಂದು ಬರೆಯಲಾಗಿದೆ. 29.37 ಲಕ್ಷಕ್ಕೂ ಹೆಚ್ಚು ಮಂದಿ ಮಧ್ಯಪ್ರದೇಶದಲ್ಲಿ ನಿರುದ್ಯೋಗಿಗಳಾಗಿದ್ದಾರೆ.

ಇದನ್ನು ಓದಿದ್ದೀರಾ? ಯುವನಿಧಿ | ಕನಿಷ್ಠ 5 ವರ್ಷಗಳ ನಿರುದ್ಯೋಗಿಗಳಿಗೂ ಯೋಜನೆ ಅನ್ವಯಿಸಲು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ರಾಜ್ಯ ಸಚಿವ ಗೌತಮ್ ಟೆಂಟ್ವಾಲ್ ಅವರು ಶನಿವಾರ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, “ಆಕಾಂಕ್ಷಿ ಯುವಕರು ಅಂದರೆ ಸರ್ಕಾರಿ ಅಥವಾ ಸರ್ಕಾರೇತರ ಉದ್ಯೋಗಗಳಲ್ಲಿ ಉನ್ನತ ಹುದ್ದೆ ಪಡೆಯಲು ಬಯಸುವ ಬಯಸುವ ಯುವಕರು, ಉದ್ಯೋಗದ ಹುಡುಕಾಟದಲ್ಲಿರುವ ಯುವಕರು ಉದ್ಯೋಗ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು” ಎಂದು ಹೇಳಿದರು.

ಇನ್ನು ಮಧ್ಯಪ್ರದೇಶ ಸರ್ಕಾರದ ಈ ಕ್ರಮವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ, “ಮಧ್ಯಪ್ರದೇಶ ಮತ್ತು ದೇಶದಲ್ಲಿ ಉದ್ಯೋಗ ಒದಗಿಸುವುದು ಅಂದರೆ ಸ್ವಯಂ ಉದ್ಯೋಗವನ್ನು ಒದಗಿಸುವುದು ಬಿಜೆಪಿ ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿಯೇ ರಾಜ್ಯ ಸರ್ಕಾರ ಬೃಹತ್ ಜಾಗತಿಕ ಹೂಡಿಕೆದಾರರ ಸಭೆ ಆಯೋಜಿಸಿದೆ. ಈ ಮೂಲಕ ಉದ್ಯೋಗ ಮತ್ತು ಸ್ವಯಂ ಉದ್ಯೋಗಕ್ಕೆ ಅವಕಾಶ ಸೃಷ್ಟಿಸಲಾಗುತ್ತದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಎಲ್ಲ ನಿರುದ್ಯೋಗಿಗಳಿಗೂ ಭತ್ಯೆ ನೀಡಲು ಎಐಡಿವೈಓ ಆಗ್ರಹ

ನಿರುದ್ಯೋಗಿಗಳನ್ನು ಆಕಾಂಕ್ಷಿ ಯುವಕರು ಎಂದು ಉಲ್ಲೇಖಿಸಿರುವುದಕ್ಕೆ ಮಧ್ಯಪ್ರದೇಶ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ರಾಜ್ಯದ ಯುವಕರನ್ನು ಸರ್ಕಾರ ಅಣಕಿಸುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಉಮಾಂಗ್ ಸಿಂಘರ್, “ಅರ್ಹತೆಗಳಿದ್ದರೂ ಕೆಲಸವಿಲ್ಲದ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಾರೆ. ಮಧ್ಯಪ್ರದೇಶ ಸರ್ಕಾರ ಅನೇಕ ಬಾರಿ ಭರವಸೆ ನೀಡಿದರೂ ಉದ್ಯೋಗ ಒದಗಿಸಲು ಸಾಧ್ಯವಾಗದ ಕಾರಣ ಈಗ ‘ಆಕಾಂಕ್ಷಿ ಯುವಕರು’ ಎಂಬ ಹೊಸ ಪದವನ್ನು ಸೃಷ್ಟಿಸುವ ಮೂಲಕ ಅಸಹಾಯಕತೆಯನ್ನು ಅಣಕಿಸಿದೆ” ಎಂದು ದೂರಿದ್ದಾರೆ.

“ನಿರುದ್ಯೋಗಿಗಳನ್ನು ಆಕಾಂಕ್ಷಿ ಯುವಕರು ಎಂದು ಕರೆದು ಮೋಹನ್ ಯಾದವ್ ಅವರ ಸರ್ಕಾರ ಏನು ಸಾಬೀತುಪಡಿಸಲು ಬಯಸುತ್ತಿದೆ ಎಂದು ಯಾರಾದರೂ ಪ್ರಶ್ನಿಸಬೇಕು” ಎಂದು ಕೂಡಾ ಹೇಳಿದ್ದಾರೆ.

“ಸಬ್ ಇನ್‌ಸ್ಪೆಕ್ಟರ್, ಸುಬೇದಾರ್‌, ಲೆಕ್ಕಪರಿಶೋಧಕರು, ಸಬ್-ಆಡಿಟರ್‌ಗಳ ನೇಮಕಾತಿಗಳು ಎಂಟು ವರ್ಷಗಳಿಂದ ಬಾಕಿ ಉಳಿದಿವೆ. ರಾಜ್ಯ ಸರ್ಕಾರ ತನ್ನ ನ್ಯೂನತೆಯನ್ನು ಮರೆಮಾಚಲು ನಿರುದ್ಯೋಗಿ ಯುವಕರ ಜೀವನದ ಜೊತೆ ಆಟವಾಡುತ್ತಿದೆ” ಎಂದು ಸಿಂಘರ್ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...