ಮಧ್ಯಪ್ರದೇಶ ಮತ ಎಣಿಕೆ | ಅಪರೇಷನ್‌ಗೆ ಬಲಿಯಾಗಿದ್ದ ಕಾಂಗ್ರೆಸ್‌ ಮೇಲೇಳುವುದೇ?

Date:

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ ಒಟ್ಟು 230 ಕ್ಷೇತ್ರಗಳಲ್ಲಿ ಯಾರು ವಿಧಾನಸಭೆಗೆ ಪ್ರವೇಶಿಸುತ್ತಾರೆ. ಯಾರು ಸೋಲುಣ್ಣುತ್ತಾರೆ ಎಂಬುದು ಮಧ್ಯಾಹ್ನದ ವೇಳೆಗೆ ತಿಳಿಯುವ ಸಾಧ್ಯತೆ ಇದೆ. 2018ರ ಚುನಾವಣೆಯಲ್ಲಿ 114 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌, ಆಪರೇಷನ್ ಕಮಲಕ್ಕೆ ಬಲಿಯಾಗಿ 2020ರಲ್ಲಿ ಅಧಿಕಾರ ಕಳೆದುಕೊಂಡಿತ್ತು. ಜ್ಯೋತಿರಾಧಿತ್ಯ ಸಿಂಧಿಯಾ ನೇತೃತ್ವದಲ್ಲಿ ಬರೋಬ್ಬರಿ 21 ಮಂದಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೇರಿಸಿದ್ದರು.

ಈಗ, ಅನೈತಿಕವಾಗಿ ಅಧಿಕಾರಕ್ಕೇರಿದ್ದ ಬಿಜೆಪಿ ಮತ್ತು ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್‌ ನಡುವೆ ಹಣಾಹಣಿ ನಡೆದಿದೆ. ಕಾಂಗ್ರೆಸ್‌ ಈ ಬಾರಿ 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭರವಸೆಯ ಮಾತನಾಡುತ್ತಿದೆ. ಆದರೆ, ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸರಾಸರಿ 98 ಸ್ಥಾನಗಳಿಗೆ ತೃಪ್ತಿ ಪಡಬೇಕಾಗುತ್ತದೆ. ಬಿಜೆಪಿ 130 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೇರುತ್ತದೆ ಎಂದು ಹೇಳುತ್ತಿವೆ.

ಪೋಲ್‌ ಸ್ಟಾರ್ ಮತ್ತು ಜನ್‌ ಕಿ ಬಾತ್‌ ಸಮೀಕ್ಷೆಗಳು ಮಾತ್ರ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿವೆ ಎಂದು ಹೇಳುತ್ತಿವೆ. ಮಧ್ಯಾಹ್ನದ ವೇಳೆಗೆ ಮಧ್ಯಪ್ರದೇಶದ ಅಧಿಕಾರ ಕಾಂಗ್ರೆಸ್‌ಗಾ, ಬಿಜೆಪಿಗಾ ಎಂಬುದು ಸ್ಪಷ್ಟವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ, ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರು, “ಕಾಂಗ್ರೆಸ್‌ 130 ಸ್ಥಾನಗಳನ್ನು ಗೆಲ್ಲಲಿದೆ. ಕಮಲ್‌ನಾಥ್‌ ಅವರು ಮುಖ್ಯಮಂತ್ರಿಯಾಗುತ್ತಾರೆ. ಅಲ್ಲಿ, ಕಾಂಗ್ರೆಸ್‌ ಪರವಾದ ಒಲವಿದೆ” ಎಂದು ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 114, ಬಿಜೆಪಿ 109, ಬಿಎಸ್‌ಪಿ 2 ಹಾಗೂ ಇತರರು 5 ಸ್ಥಾನಗಳನ್ನು ಗೆದ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...