ಮಹಾ ಕುಂಭಮೇಳ ಕಾಲ್ತುಳಿತ | ಈವರೆಗೆ ಮೃತರ ನಿಖರ ಸಂಖ್ಯೆ ಯಾಕೆ ಬಹಿರಂಗಪಡಿಸಿಲ್ಲ: ಅಖಿಲೇಶ್ ಪ್ರಶ್ನೆ

Date:

ಮಹಾ ಕುಂಭಮೇಳ ಕಾಲ್ತುಳಿತ ವಿಚಾರವನ್ನು ಲೋಕಸಭೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಸ್ತಾಪಿಸಿದ್ದಾರೆ. ಪ್ರಸ್ತುತ ಎಲ್ಲವೂ ಡಿಜಿಟಲೀಕರಣವಾಗಿರುವಾಗ ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ನಿಖರ ಸಂಖ್ಯೆಯನ್ನು ಈವರೆಗೂ ಯಾಕೆ ಬಹಿರಂಗಪಡಿಸಿಲ್ಲ ಎಂದು ಅಖಿಲೇಶ್ ಪ್ರಶ್ನಿಸಿದ್ದಾರೆ.

ಮಹಾ ಕುಂಭಮೇಳವನ್ನು ಸರಿಯಾಗಿ ನಿರ್ವಹಣೆ ಮಾಡದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, “ಡಬಲ್ ಇಂಜಿನ್ ಸರ್ಕಾರವು ಈಗ ಪ್ರಮಾದವನ್ನು ಕೂಡಾ ಡಬಲ್ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ತೆರಳಿದ ಡಿಸಿಎಂ ಡಿ ಕೆ ಶಿವಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲ ಬಾರಿಗೆ ಕುಂಭಮೇಳಕ್ಕೆ ಹೋದ ಭಕ್ತರು ಸುಮಾರು 300 ಕಿಲೋ ಮೀಟರ್ ಸಂಚಾರದಟ್ಟಣೆಯಲ್ಲಿ ಸಿಲುಕುವಂತಾಯಿತು. ಗಡಿಗಳನ್ನು ಸೀಲ್ ಮಾಡಲಾಗಿದೆ. ಸರ್ಕಾರವು ಟ್ರಾಫಿಕ್ ಅನ್ನು ನಿರ್ವಹಿಸಲು ಸಾಧ್ಯವಾಗದೆ ಇರುವಂತದ್ದೆ ವೀಕ್ಷಿತ ಭಾರತವೇ? ನಾವು ಭೂಮಿಯಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದೆ ಇರುವಾಗ ಚಂದ್ರನಲ್ಲಿಗೆ ಹೋಗುವುದರಲ್ಲೇನಿದೆ” ಎಂದು ಪ್ರಶ್ನಿಸಿದರು.

“ಡ್ರೋನ್‌ಗಳು ಈಗ ಎಲ್ಲಿದೆ ಎಂದು ನಾನು ಕೇಳಲು ಬಯಸುತ್ತೇನೆ? ಡಿಜಿಟಲೀಕರಣದ ಬಗ್ಗೆ ಸಾಕಷ್ಟು ಜಾಹೀರಾತುಗಳನ್ನು ನೀಡಿದರು. ಆದರೆ ಮಹಾ ಕುಂಭಮೇಳದಲ್ಲಾದ ಕಾಲ್ತುಳಿತದಿಂದ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ನಿಖರ ಮಾಹಿತಿಯನ್ನು ಈವರೆಗೆ ನೀಡಲು ಸಾಧ್ಯವಾಗಿಲ್ಲ” ಎಂದು ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಅಖಿಲೇಶ್ ಯಾದವ್ ಟೀಕಿಸಿದರು.

ಸುಮಾರು 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳ ಪ್ರಯಾಗರಾಜ್‌ನಲ್ಲಿ ಜನವರಿ 13ರಿಂದ ಆರಂಭವಾಗಿದ್ದು 45 ದಿನಗಳ ಕಾಲ ಇರಲಿದೆ. ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು ಉತ್ತರ ಪ್ರದೇಶ ಸರ್ಕಾರ 30 ಮಂದಿ ಸಾವನ್ನಪ್ಪಿ, 60 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ಆದರೆ ಮೃತರ ಸಂಖ್ಯೆ 50ರ ಆಸುಪಾಸಿನಲ್ಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದೆ ಮತ್ತು ಸ್ಥಳೀಯರು ಹೇಳಿದ್ದಾರೆ. ಇನ್ನೂ ಕೂಡಾ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...