ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

Date:

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ ನಿರ್ಧರಿಸಲಿದೆ. ಆದರೆ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾಗಿರುವ ಕಾರಣ ಆರ್‌ಜೆಡಿಗೆ ಕಾನೂನುಬದ್ಧ ಹಕ್ಕಿದೆ ಎಂದು ಅಜಮ್‌ಗಢದ ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಹೇಳಿದ್ದಾರೆ.

ಬಿಹಾರದಲ್ಲಿ ನವೆಂಬರ್ ಒಳಗಾಗಿ ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೆಡೆ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ಆಡಾಳಿತರೂಢ ಪಕ್ಷ ಜೆಡಿಯು ಮಿತ್ರ ಪಕ್ಷ ಬಿಜೆಪಿ ಜೊತೆ ಪ್ರಚಾರ ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್, ಆರ್‌ಜೆಡಿ ಒಳಗೊಂಡ ವಿಪಕ್ಷಗಳ ಮೈತ್ರಿಕೂಟ ಪ್ರಚಾರದಲ್ಲಿ ತೊಡಗಿದೆ. ಎರಡೂ ಕಡೆಯ ಸಿಎಂ ಅಭ್ಯರ್ಥಿ ಯಾರು ಎಂಬ ಬಗ್ಗೆ ಚರ್ಚೆಯೂ ಶುರುವಾಗಿದೆ.

ಇದನ್ನು ಓದಿದ್ದೀರಾ? ಎನ್‌ಡಿಎ ಸರ್ಕಾರ ಬಿಹಾರದ ಜನರ ಮೇಲೆ ಹೊರೆ, 15 ವರ್ಷ ಹಳೆಯ ವಾಹನದಂತೆ ಸ್ಕ್ರಾಪ್ ಮಾಡಬೇಕು: ತೇಜಸ್ವಿ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಜೆಡಿ ತೇಜಸ್ವಿ ಯಾದವ್ ಅವರೇ ಮಹಾಘಟಬಂಧನದ ಸಿಎಂ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದರೆ ಕಾಂಗ್ರೆಸ್ ಮಾತ್ರ ಎಲ್ಲಿಯೂ ಈ ಬಗ್ಗೆ ಸ್ಪಷ್ಟಣೆಯನ್ನು ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೂ ಪ್ರಶ್ನಿಸಿದ್ದು ರಾಹುಲ್ ಉತ್ತರಿಸಿಲ್ಲ.

ಇವೆಲ್ಲವುದರ ನಡುವೆ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಆರ್‌ಜೆಡಿಗೆ ಕಾನೂನುಬದ್ಧ ಹಕ್ಕಿದೆ ಎಂದು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ಹೇಳಿಕೊಂಡಿದ್ದಾರೆ. ಹಾಗೆಯೇ, “ಬಿಹಾರದಲ್ಲಿ ಯಾವ ಪಕ್ಷ ಪ್ರಬಲವಾಗಿದೆ, ಅದರ ನಾಯಕ ಯಾರು ಎಂಬುದು ಎಲ್ಲರಿಗೂ ತಿಳಿದಿದೆ” ಎಂದೂ ಹೇಳಿದ್ದಾರೆ.

“ಸ್ವಾಭಾವಿಕವಾಗಿಯೇ ಆರ್‌ಜೆಡಿ ಬಿಹಾರದಲ್ಲಿ ಪ್ರಮುಖ ಪಕ್ಷವಾಗಿದೆ. ಹಾಗಾಗಿ ಆರ್‌ಜೆಡಿಗೆ ತನ್ನದೇ ಆದ ಹಕ್ಕಿದೆ. ಆದರೂ ಅಂತಿಮವಾಗಿ ನಿರ್ಧಾರವನ್ನು ತೆಗೆದುಕೊಳ್ಳುವುದು ಮಹಾಘಟಬಂಧನ ಒಕ್ಕೂಟ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...