ಬಿಹಾರದಲ್ಲಿ ಸರ್ಕಾರ ರಚಿಸಿದ ನಂತರ ವಕ್ಫ್ ಕಾಯ್ದೆಯನ್ನು ‘ಕಸದ ಬುಟ್ಟಿಗೆ’ ಎಸೆಯುತ್ತೇವೆ: ತೇಜಸ್ವಿ ಯಾದವ್

Date:

ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಅಧಿಕಾರವನ್ನು ಕಳೆದುಕೊಳ್ಳುವ ಹಂತದಲ್ಲಿದೆ. ಮಹಾಘಟಬಂಧನ ನೇತೃತ್ವದ ಹೊಸ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚಿಸಿದ ನಂತರ ನರೇಂದ್ರ ಮೋದಿ ಸರ್ಕಾರ ತಂದ ವಕ್ಫ್ ಕಾಯ್ದೆಯನ್ನು ಕಸದಬುಟ್ಟಿಗೆ ನಮ್ಮ ಸರ್ಕಾರ ಎಸೆಯಲಿದೆ” ಎಂದು ಆರ್‌ಜೆಡಿ ನಾಯಕ, ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ‘ಸೇವ್ ವಕ್ಫ್, ಸೇವ್ ಕಾನ್ಸ್ಟಿಟ್ಯೂಷನ್’ ಮೆರವಣಿಗೆಯಲ್ಲಿ ಮಾತನಾಡಿದರು. ವಿವಿಧ ರಾಜಕೀಯ ಪಕ್ಷಗಳ ನಾಯಕರು ಪ್ರತಿಭಟನೆಯ ಸಂಕೇತವಾಗಿ ಕಪ್ಪು ಪಟ್ಟಿಗಳನ್ನು ಧರಿಸಿದ್ದರು.

ಇದನ್ನು ಓದಿದ್ದೀರಾ? ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ, ತೇಜಸ್ವಿ ಯಾದವ್‌ ಬಿಹಾರ ಮುಖ್ಯಮಂತ್ರಿ: ಕನ್ಹಯ್ಯಾ ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಅವರು ಆರ್‌ಜೆಡಿ ಈ ಕಾನೂನನ್ನು ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸಂಸದರು ಸಂಸತ್ತಿನ ಎರಡೂ ಸದನಗಳಲ್ಲಿ ಈ ಕಾನೂನನ್ನು ವಿರೋಧಿಸಿದ್ದಾರೆ. ನಾವು ಶಾಸನದ ವಿರುದ್ಧ ನ್ಯಾಯಾಲಯಕ್ಕೂ ಹೋಗಿದ್ದೇವೆ” ಎಂದು ಹೇಳಿದರು.

“ಬಿಹಾರದಲ್ಲಿರುವ ನನ್ನ ಮುಸ್ಲಿಂ ಸಹೋದರರು ಎನ್‌ಡಿಎ ಸರ್ಕಾರ ಅಧಿಕಾರದಿಂದ ಕೆಳಗಿಳಿಯುತ್ತಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನವೆಂಬರ್‌ನಲ್ಲಿ, ರಾಜ್ಯದಲ್ಲಿ ಹೊಸ ಬಡವರ ಪರವಾದ ಸರ್ಕಾರ ರಚನೆಯಾಗಲಿದೆ. ಆ ಸರ್ಕಾರ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತದೆ” ಎಂದು ಭರವಸೆ ನೀಡಿದರು.

“ಸ್ವಾತಂತ್ರ್ಯವು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ಮಾಡಿದ ತ್ಯಾಗದ ಫಲದಿಂದ ನಮಗೆ ಸಿಕ್ಕಿದೆ ಎಂದು ಕೇಂದ್ರವನ್ನು ಆಳುವ ಮತ್ತು ರಾಜ್ಯದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವ ಬಿಜೆಪಿ ತಿಳಿದಿರಬೇಕು. ದೇಶವು ತನ್ನ ತಂದೆಯ ಆಸ್ತಿಯಂತೆ ಯಾರೂ ವರ್ತಿಸಬಾರದು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...