ಮಹಾರಾಷ್ಟ್ರ ಚುನಾವಣೆ | 2022ರಲ್ಲಿ ಶಿವಸೇನೆ ವಿಭಜನೆಗೆ ಬಿಜೆಪಿ ಹೈಕಮಾಂಡ್‌ ಒಪ್ಪಿತ್ತು; ಪೃಥ್ವಿರಾಜ್ ಚೌಹಾಣ್ ಆರೋಪ

Date:

ಮಹಾವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ 2022ರಲ್ಲಿನ ಶಿವಸೇನೆ ವಿಭಜನೆಗೆ ಬಿಜೆಪಿಯ ಉನ್ನತ ನಾಯಕತ್ವ ಒಪ್ಪಿಗೆ ನೀಡಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಆರೋಪಿಸಿದ್ದಾರೆ.

ಹಾರಾಷ್ಟ್ರದ ಸತಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿರಾಜ್ ಚೌಹಾಣ್, “2022ರಲ್ಲಿ ಮುಖ್ಯಮಂತ್ರಿಯಾಗಿದ್ದ ಹಾಗೂ ಶಿವಸೇನೆ ಅಧ್ಯಕ್ಷರಾಗಿದ್ದ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಶಿವಸೇನೆಯ ಒಂದು ಗುಂಪು ಬಂಡಾಯ ಎದ್ದಿತ್ತು. ಅದಕ್ಕೆ ಬಿಜೆಪಿ ಕುಮ್ಮಕ್ಕು ನೀಡಿತ್ತು. ಶಿವಸೇನೆ ವಿಭಜನೆಗೊಂಡ ನಂತರ, ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂದೆ ಬಿಜೆಪಿ ಜೊತೆಗೂಡಿ ಮುಖ್ಯಮಂತ್ರಿಯಾಗಿದರು” ಎಂದು ಹೇಳಿದ್ದಾರೆ.

“ಶಿವಸೇನೆಯನ್ನು ವಿಭಜಿಸುವ ಮೂಲಕ, ಬಿಜೆಪಿಯ ಉನ್ನತ ನಾಯಕತ್ವವು ಮಹಾವಿಕಾಸ್ ಅಘಾಡಿ ಸರ್ಕಾರವನ್ನು ಪತನಗೊಳಿಸಿತ್ತು. ಈ ಸಂಪೂರ್ಣ ನಡೆಗೆ ಬಿಜೆಪಿ ಉನ್ನತ ನಾಯಕತ್ವದ ಅನುಮೋದನೆಯಿತ್ತು” ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಸೇನೆಯನ್ನು ಒಡೆದು, ಮಹಾವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸುವ ಯೋಜನೆಯನ್ನು ಕೇವಲ ಇಬ್ಬರು ಮೂವರಿಂದ ಮುಂಬೈನಲ್ಲಿ ಮಾಡಲಾಗಿಲ್ಲ. ಇದರ ಹಿಂದೆ ಇಡೀ ಬಿಜೆಪಿ ಯಂತ್ರವೇ ಇದ್ದುದರಿಂದ, ಅತ್ಯಂತ ನಾಜೂಕಾಗಿ ಈ ಯೋಜನೆಯನ್ನು ಮಾಡಲಾಗಿತ್ತು. ಸೇನಾ ಕಾರ್ಯಾಚರಣೆಯಂತೆ ಶಾಸಕರಿಗೆ ಭದ್ರತೆ ಹಾಗೂ ಚಾರ್ಟರ್ಡ್ ವಿಮಾನಗಳನ್ನು ಒದಗಿಸಲಾಗಿತ್ತು” ಎಂದು ಅವರು ಆಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ‘ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ’ ಎಂಬ ಭ್ರಷ್ಟಾಚಾರ ವಿರೋಧಿ ಘೋಷಣೆಯನ್ನು ಮಹಾರಾಷ್ಟ್ರದಲ್ಲಿ ಕೂಗಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...