ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

Date:

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದು, ಮಹಾರಾಷ್ಟ್ರ ಸರ್ಕಾರವು ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಮತದಾರರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಮತ್ತು 2024ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತಗಳಲ್ಲಿ ಬದಲಾವಣೆಯಾಗಿದೆ ಎಂದು ಕಾಂಗ್ರೆಸ್ ದೂರಿದೆ. ಈ ಹಿಂದೆಯೂ ಕಾಂಗ್ರೆಸ್ ಹಲವು ಬಾರಿ ಈ ಆರೋಪ ಮಾಡಿದೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ನ ದತ್ತಾಂಶ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಈ ಆರೋಪಗಳನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರ ಸರ್ಕಾರವು ಸರಿಯಾದ ರೀತಿಯ, ಕಾನೂನುಬದ್ಧವಾದ ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿಲ್ಲ. ಭಾರತದ ಅತೀ ಹಳೆಯ, ಸ್ವಾತಂತ್ರ್ಯದಲ್ಲಿ ಹೋರಾಡಿದ ಏಕೈಕ ಪಕ್ಷವಾಗಿ ನಾವು ಅತೀ ಜವಾಬ್ದಾರಿಯಿಂದ ಈ ಹೇಳಿಕೆಯನ್ನು ನೀಡುತ್ತಿದ್ದೇವೆ” ಎಂದು ಪ್ರವೀಣ್ ಚಕ್ರವರ್ತಿ ತಿಳಿಸಿದ್ದಾರೆ.

“ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತ ಪ್ರಮಾಣದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬಂದಿವೆ. ಲೋಕಸಭೆ ಚುನಾವಣೆಯ ಬಳಿಕ ವಿಧಾನಸಭೆ ಚುನಾವಣೆ ವೇಳೆಗೆ ಒಟ್ಟಾಗಿ 48 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. 2019ರಲ್ಲಿ ಬರೀ 32 ಲಕ್ಷ ಮತದಾರರನ್ನು ಮಾತ್ರ ಪಟ್ಟಿಗೆ ಸೇರಿಸಲಾಗಿತ್ತು” ಎಂದು ವಿವರಿಸಿದ್ದಾರೆ.

“ಇನ್ನು ಆಶ್ಚರ್ಯವೆಂದರೆ ಈ ಎಲ್ಲಾ ಹೊಸ ಮತದಾರರು ಒಂದೇ ಮೈತ್ರಿಕೂಟಕ್ಕೆ ಮತ ಹಾಕಿರುವಂತಿದೆ, ಅದು ಮಹಾಯುತಿ. ಇದು ತರ್ಕಬದ್ಧವಾಗಿ ಕಾಣುತ್ತದೆಯೇ? ಇದು ಪವಾಡ ಸದೃಶವಾಗಿ ನಡೆದ ಕಾಕತಾಳೀಯತೆಯೇ? ಇದನ್ನು ಹೇಗೆ ವಿವರಿಸುವುದು? ಇದು ವಿಚಿತ್ರವಲ್ಲವೇ” ಎಂದು ಚಕ್ರವರ್ತಿ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಲೋಕಸಭೆ ಚುನಾವಣೆಗೆ ಹೋಲಿಸಿದರೆ ಮಹಾಯುತಿ ಸುಮಾರು 72 ಲಕ್ಷ ಅಧಿಕ ಮತವನ್ನು ವಿಧಾನಸಭೆ ಚುನಾವಣೆಯಲ್ಲಿ ಪಡೆದಿದೆ. ಮಹಾ ವಿಕಾಸ್ ಅಘಾಡಿಗೆ ಮತ ಹಾಕಿದ್ದ ಕೇವಲ 24 ಲಕ್ಷ ಜನರು ಮತ ಬದಲಾಯಿಸಿಕೊಂಡಿದ್ದಾರೆ. ಆದರೆ ಮಹಾಯುತಿ 72 ಲಕ್ಷ ಮತವನ್ನು ಪಡೆದಿದೆ ಎಂದು ಕಾಂಗ್ರೆಸ್ ನಾಯಕ ವಿವರಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 48 ಕ್ಷೇತ್ರಗಳ ಪೈಕಿ ಮಹಾ ವಿಕಾಸ್ ಅಘಾಡಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, 18 ಮಾತ್ರ ಮಹಾಯುತಿ ಪಾಲಾಗಿದೆ. ಆದರೆ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ 288 ಕ್ಷೇತ್ರಗಳ ಪೈಕಿ 230ರಲ್ಲಿ ಮಹಾಯುತಿ ಗೆದ್ದಿದೆ. ಈ ಪೈಕಿ ಬಿಜೆಪಿ 132, ಶಿವಸೇನೆ (ಶಿಂದೆ ಬಣ) 57 ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಕ್ಷೇತ್ರಗಳಲ್ಲಿ ಜಯಗಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...