ವಿಧಾನಸಭೆಯಲ್ಲಿ ರಮ್ಮಿ ಆಡಿದ ಮಹಾರಾಷ್ಟ್ರ ಸಚಿವ ಮಾಣಿಕ್ರಾವ್ ಕೊಕಾಟೆ: ವಿಪಕ್ಷಗಳಿಂದ ಆಕ್ರೋಶ

Date:

ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ-ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಸೇರಿದಂತೆ ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಕೃಷಿ ಸಚಿವ ಕೊಕಾಟೆ ಸದನದಲ್ಲಿ ಕುಳಿತು ಮೊಬೈಲ್‌ ನೋಡುತ್ತಿರುವುದು, ಅದರಲ್ಲಿ ರಮ್ಮಿ ಆಡುತ್ತಿರುವುದು ಕಂಡುಬಂದಿದೆ. “ರೈತರು ಮತ್ತು ಕೃಷಿಯ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ರಾಜ್ಯ ಸಚಿವರು ‘ರಮ್ಮಿ’ ಎಂಬ ಆಟವನ್ನು ಆಡುತ್ತಿದ್ದಾರೆ” ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಕಾಟೆಯನ್ನು ದಾರಿ ತಪ್ಪಿದ ಶಾಸಕ ಎಂದು ರೋಹಿತ್ ಪವಾರ್ ಕರೆದಿದ್ದಾರೆ. ಹಾಗೆಯೇ ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಕೃಷಿ ಸಮಸ್ಯೆಗಳ ಬಗ್ಗೆ ಸಚಿವರು ಗಮನ ಹರಿಸುತ್ತಿಲ್ಲ ಎಂದು ಕೋಕಾಟೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರಾಜ್ಯದಲ್ಲಿ ಪ್ರತಿದಿನ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅಧಿಕಾರದಲ್ಲಿರುವ ಎನ್‌ಸಿಪಿ ಬಣವು ಬಿಜೆಪಿಯನ್ನು ಸಂಪರ್ಕಿಸದೆ ಏನನ್ನೂ ಮಾಡಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದೆ. ಲೆಕ್ಕವಿಲ್ಲದಷ್ಟು ಕೃಷಿ ಸಮಸ್ಯೆಗಳು ಬಾಕಿ ಉಳಿದಿದೆ ಮತ್ತು ದಿನನಿತ್ಯ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕೃಷಿ ಸಚಿವರಿಗೆ ಬೇರೆ ಏನೂ ಮಾಡಲು ಸಾಧ್ಯವಾಗದೆ, ರಮ್ಮಿ ಆಡಲು ಸಮಯ ಸಿಕ್ಕಂತೆ ಕಾಣುತ್ತಿದೆ” ಎಂದು ಮರಾಠಿಯಲ್ಲಿ ಶಾಸಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಈ ದಾರಿ ತಪ್ಪಿದ ಸಚಿವರು ಮತ್ತು ಸರ್ಕಾರವು ಬೆಳೆ ವಿಮೆ, ಸಾಲ ಮನ್ನಾ ಮತ್ತು ಬೆಲೆ ಬೆಂಬಲವನ್ನು ಕೋರುವ ರೈತರ ಹತಾಶ ಮನವಿಯನ್ನು ಎಂದಾದರೂ ಕೇಳುತ್ತದೆಯೇ? ‘ಬಡ ರೈತರ ಹೊಲಗಳಿಗೆ ಕೆಲವೊಮ್ಮೆ ಬನ್ನಿ, ಮಹಾರಾಜ್” ಎಂದು ವ್ಯಂಗ್ಯವಾಡಿದ್ದಾರೆ.

ಈ ಘಟನೆಯು ವಿಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಗಿದೆ. ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ವೀಡಿಯೊಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಆದರೆ ಈ ಎಲ್ಲ ಆರೋಪಗಳ ಬಗ್ಗೆ ಸಚಿವ ಕೊಕಾಟೆ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...