ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ಮಹಾತ್ಮ ಗಾಂಧಿ, ಈಗಿನ ಕಾಂಗ್ರೆಸ್‌ ಗಾಂಧಿಗಳು ನಕಲಿಗಳು: ಆರ್.ಅಶೋಕ್

Date:

ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು” ಎಂದು ಕಿಡಿಕಾದರು.

ಕಾರ್ಮಿಕರಿಗೆ ಥಳಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ. ಶೇ.60 ರಷ್ಟು ಕಮಿಷನ್ ಕೊಟ್ಟರೆ ಮಾತ್ರ ಈ ಸರ್ಕಾರದಲ್ಲಿ ಫೈಲ್ ಮೂವ್ ಆಗುತ್ತದೆ. ವಿಜಯಪುರಲ್ಲಿ ಕಾರ್ಮಿಕರನ್ನು ನಡು ರಸ್ತೆಯಲ್ಲಿಯೇ ಥಳಿಸುತ್ತಿರುವ ಹೃದಯವಿದ್ರಾವಕ ಘಟನೆಯನ್ನು ಮಾಧ್ಯಮದಲ್ಲಿ ನೋಡಿದೆ. ಬೀದಿಯಲ್ಲೇ ನಿಂತು ರಾಜಾರೋಷವಾಗಿ ಹೊಡೆಯುತ್ತಿದ್ದಾರೆ ಎಂದರೆ ರಾಜ್ಯದಲ್ಲಿರುವ ದರೋಡೆಕೋರರಿಗೆ, ರೌಡಿಗಳಿಗೆ ಪೊಲೀಸರ ಬಗ್ಗೆ ಏನು ಸಂದೇಶ ಹೋಗುತ್ತಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ. ಹಾಡಹಗಲೇ ಬ್ಯಾಂಕ್ ದರೋಡೆ ನಡೆಯುತ್ತಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಇದೊಂದು ಕುಂಭಕರ್ಣ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

“ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ 20 ಹಗರಣಗಳು ನಡೆದಿವೆ. ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ? ಜಿಲ್ಲಾ ಉಸ್ತುವಾರಿ ಸಚಿವರು ತಾವು ನಿರ್ವಹಿಸುತ್ತಿಲ್ಲ ಎನ್ನುತ್ತಿದ್ದಾರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಾನು ಹ್ಯಾಂಡಲ್ ಮಾಡುತ್ತಿಲ್ಲ ಎನ್ನುತ್ತಿದ್ದಾರೆ. ಸಚಿವ ಪರಮೇಶ್ವರ್ ನನಗೆ ವಿಷಯ ಗೊತ್ತಿಲ್ಲ ಎಂದಿದ್ದಾರೆ. ಗೃಹ ಇಲಾಖೆಯನ್ನು ಯಾರು ಹ್ಯಾಂಡಲ್ ಮಾಡುತ್ತಿದ್ದಾರೆ” ಎಂದು ಪ್ರಶ್ನೆ ಮಾಡಿದರು.

“ಕಾಂಗ್ರೆಸ್ ಎಂದರೆ 60% ಕಮಿಷನ್ ಸರ್ಕಾರ. ಎಲ್ಲ ಇಲಾಖೆಗಳಲ್ಲೂ 60% ಕಮಿಷನ್ ಪಡೆಯುತ್ತಿದ್ದಾರೆ. ಮುಡಾದಲ್ಲಿ 3 ಸಾವಿರ ಕೋಟಿ ರೂ.ಗೂ ಹೆಚ್ಚು ಹಾಗೂ ವಾಲ್ಮೀಕಿ ನಿಗಮದಲ್ಲಿ 197 ಕೋಟಿ ರೂ. ಹಗರಣ ಆಗಿದೆ. ಈ ಎಲ್ಲ ಹಣ ಈಗ ಬೆಳಗಾವಿಯ ಕಾಂಗ್ರೆಸ್ ಸಮಾವೇಶಕ್ಕೆ ಬಳಕೆಯಾಗಿದೆ. ಕಾಂಗ್ರೆಸ್ ನವರು ಕರ್ನಾಟಕವನ್ನು ಲೂಟಿ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಅನುದಾನ ನೀಡುತ್ತಿಲ್ಲವೆಂದು ಸಚಿವ ಸಂಪುಟ ಸಭೆಯಲ್ಲಿ ಗಲಾಟೆಯಾಗಿದೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡಲು ಸಿದ್ಧರಾಗಿದ್ದಾರೆ. ಎರಡು ವರ್ಷಗಳ ಹಿಂದೆ 15 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದರು. ಈಗಲೂ ಅದೇ ಪರಿಸ್ಥಿತಿಯಿದೆ. ಮೊದಲು ಅವರ ಪಕ್ಷದಲ್ಲಿರುವ ಸಮಸ್ಯೆ ಬಗೆಹರಿಸಿಕೊಳ್ಳಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...