ಪದೇ-ಪದೇ ನಾಲಿಗೆ ಹರಿಬಿಡುತ್ತಲೇ ವಿವಾದ ಸೃಷ್ಟಿಸುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಗ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡಿದ್ದಾರೆ. ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
“ಗಾಂಧಿಯನ್ನು ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಅವರು ಪಾಕಿಸ್ತಾನದ ರಾಷ್ಟ್ರಪತಿ. ಅಂತೆಯೇ, ಜವಾಹರ ಲಾಲ್ ನೆಹರು ಅವರನ್ನು ದೇಶ ಮೊದಲ ಪ್ರಧಾನಿ ಎಂದೂ ನಾನು ಒಪ್ಪುವುದಿಲ್ಲ” ಎಂದು ಯತ್ನಾಳ್ ಹೇಳಿದ್ದಾರೆ.




