ಪ್ರಶ್ನೆಗೆ ಲಂಚ: ಸಿಬಿಐಗೆ ಸ್ವಾಗತ ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Date:

ತಮ್ಮ ವಿರುದ್ಧ ಕೇಳಿಬಂದಿರುವ ಪ್ರಶ್ನೆಗಾಗಿ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿರುವ ಗಂಭೀರ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿ ಈ ಬಗ್ಗೆ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಹುವಾ ಮೊಯಿತ್ರಾ, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಿಬಿಐ ತನಿಖೆಗೂ ತಾವು ಸಿದ್ಧ. ಇದೊಂದು ಸುಳ್ಳು ಆರೋಪ ಎಂದು ಅವರು ಹೇಳಿದ್ದಾರೆ.

“ನಕಲಿ ಪದವೀಧರ ಮತ್ತು ಇತರ ಬಿಜೆಪಿ ದಿಗ್ಗಜರ ವಿರುದ್ಧ ಬಾಕಿ ಉಳಿದಿರುವ ಸಾಂವಿಧಾನಿಕ ಸವಲತ್ತುಗಳ ಉಲ್ಲಂಘನೆ ಪ್ರಕರಣವನ್ನು ಮೊದಲು ವಿಚಾರಣೆ ನಡೆಸಲಿ. ಬಳಿಕ ಸ್ಪೀಕರ್ ಅವರು ನನ್ನ ವಿರುದ್ಧದ ಆರೋಪವನ್ನು ವಿಚಾರಿಸಲಿ. ಜೊತೆಗೆ ಅದಾನಿ ಹಗರಣದಲ್ಲಿ ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಎಫ್‌ಐಆರ್ ದಾಖಲಿಸಲು ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಮಾತ್ರವಲ್ಲದೇ ಈ ಸಂಬಂಧ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಈ ಆರೋಪ ಮಾಡಿದ್ದು, ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಮತ್ತು ತಕ್ಷಣದಿಂದಲೇ ಅವರನ್ನು ಅಮಾನತಿನಲ್ಲಿಡಬೇಕು ಎಂದು ಆಗ್ರಹಿಸಿದ್ದಾರೆ.

ಟಿಎಂಸಿ ಸಂಸದೆ ಮೊಯಿತ್ರಾ ಅವರು ಸದನದಲ್ಲಿ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳನ್ನು ಉದ್ಯಮಿಯೊಬ್ಬರ ಕಂಪನಿಯ ಪರವಾಗಿಯೇ ಕೇಳಿದ್ದಾರೆ. ಇದಕ್ಕಾಗಿ ಅವರು ಲಂಚದ ರೂಪದಲ್ಲಿ ಹಣ ಮತ್ತು ಉಡುಗೊರೆಗಳನ್ನು ಪಡೆದುಕೊಂಡಿದ್ದಾರೆ ಎಂದು ಕೆಲ ದಾಖಲೆಗಳನ್ನೂ ಸಲ್ಲಿಸಿದ್ದಾರೆ.

ಈ ಪಿತೂರಿ ಇಲ್ಲಿಗೆ ಕೊನೆಗೊಳ್ಳುವುದಿಲ್ಲ ಎಂದು ಹೇಳಿರುವ ದುಬೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಗುರಿಯಾಗಿಸಿಕೊಂಡು ಸರ್ಕಾರವನ್ನು ಟೀಕಿಸಲೆಂದೇ ಅವರು ಸದನದಲ್ಲಿ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಮತ್ತು ಮಾಹಿತಿಯನ್ನು ಉದ್ಯಮಿಗಳೊಂದಿಗೆ ಸಂಸದೆ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...