ಮಲಯಾಳಿ ಭಾಷಾ ಮಸೂದೆ-2025 : ಆರ್ ಅಶೋಕ್ ಪೋಸ್ಟ್ ಡಿಲೀಟ್ ಮಾಡಿದ್ದೇಕೆ?

Date:

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಸುವ ಅಲ್ಲಿನ ಕೇರಳ ಸರ್ಕಾರದ ಪ್ರಸ್ತಾವಿತ ‘ಮಲಯಾಳಿ ಭಾಷಾ ಮಸೂದೆ-2025’ ಯನ್ನು ಹಿಂಪಡೆಯಬೇಕು ಎಂದು ಸಿಎಂ ಸಿದ್ದಾರಾಮಯ್ಯ ಆಗ್ರಹಿಸಿದ್ದಾರೆ.

ಸಿಎಂ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡುವ ಮೊದಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ‘ಕೇರಳದಲ್ಲಿರುವ ಕನ್ನಡಿಗರ ಪರವಾಗಿ ಕಾಂಗ್ರೆಸ್ ನಾಯಕರು ಧ್ವನಿ ಎತ್ತುತ್ತಾರಾ? ಕನ್ನಡಿಗರ ಪರ ನಿಲ್ಲುತ್ತಾರಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಆದರೆ ಈಗ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.

ತನ್ನ ‘ಎಕ್ಸ್’ ಖಾತೆಯಲ್ಲಿ ‘ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಮಲಯಾಳಿಗಳ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಮಲಯಾಳ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಿ ಭಾಷಾ ಮಸೂದೆ-2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ?’ ಎಂದು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ : ಕರ್ನಾಟಕದ ಯುವಕರಿಗೆ ಮೋಸ, ಮಲಯಾಳಿ ಯುವಕರಿಗೆ ಕೆಲಸ: ಆರ್ ಅಶೋಕ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಮುಂದುವರೆದು, ‘ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ? ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, ‘ಮಾನವೀಯತೆ’ ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆ.ಸಿ. ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುವುದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ’ ಎಂದಿದ್ದರು.

Screenshot 2026 01 09 at 5.12.00 PM

ಆರ್.ಅಶೋಕ್ ಅವರ ‘ಎಕ್ಸ್’ ಪೋಸ್ಟ್ ಅನ್ನು ಪ್ರಜಾವಾಣಿ ಸೇರಿದಂತೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಈಗ ಆ ಪೋಸ್ಟ್ ಇಲ್ಲ. ಪೋಸ್ಟ್‌ ಡಿಲೀಟ್‌ ಮಾಡಿದ್ಯಾಕೆ ಎಂಬ ಪ್ರಶ್ನೆ ಮೂಡಿದೆ.

ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಒಳ್ಳೆಯದು. ಅದೇ ರೀತಿ ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಪ್ರಜೆಗಳಿಂದ ಅನೇಕ ಸಲ ಟೀಕೆಗಳಿಗೆ ಗುರಿಯಾಗುತ್ತವೆ. ಆದರೆ ವಿಪಕ್ಷ ನಾಯಕ ಅಶೋಕ್ ಇತ್ತೀಚಿನ ದಿನಗಳಲ್ಲಿನ ತಮ್ಮ ಹೇಳಿಕೆಗಳಿಂದಲೇ ಟೀಕೆಗೆ ಗುರಿಯಾಗಿದ್ದಾರೆ. ಆರ್.ಅಶೋಕ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಸಮರ್ಥರು ಎಂದು ಅನೇಕರು ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಕೋಗಿಲು ಗ್ರಾಮದ ಫಕೀರ್ ಕಾಲೋನಿಯಲ್ಲಿ ಅಕ್ರಮ ವಲಸಿಗರು ಮನೆ ನಿರ್ಮಿಸಿಕೊಂಡಿದ್ದರು ಎಂದು ಆರೋಪಿಸಿ ಜಿಬಿಎ ಅಧಿಕಾರಿಗಳು ನೆಲಸಮಗೊಳಿಸಿದ್ದರು. ಅಲ್ಲಿ ಮುಸ್ಲಿಮರೇ ಹೆಚ್ಚಿರುವ ಕಾರಣಕ್ಕೆ ಬಿಜೆಪಿಯ ಅನೇಕ ನಾಯಕರು ಬಾಯಿಗೆ ಬಂದ ಹಾಗೆ ಮಾತನಾಡಿದ್ದರು.

ಬಹಳ ಮುಖ್ಯವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರೇ, ಅಲ್ಲಿರುವ ಸಂತ್ರಸ್ತರನ್ನು “ಬಾಂಗ್ಲಾದೇಶಿಗಳು” ಎಂದು ಕರೆದಿದ್ದರು. ಆದರೆ ವಿಪಕ್ಷ ನಾಯಕರ ಹೇಳಿಕೆಯಿಂದ, ಬಾಂಗ್ಲಾದೇಶದ ಜನ ಹೇಗೆ ಅಷ್ಟೊಂದು ಭದ್ರತೆಯಿರುವ ಗಡಿದಾಟಿ ಭಾರತಕ್ಕೆ ಹೇಗೆ ಬಂದರು? ಗಡಿ ಭದ್ರತೆ ಇರುವುದು ಮೋದಿ ಸರ್ಕಾರದ ಅಡಿಯಲ್ಲಿ. ಕೇಂದ್ರ ಸರ್ಕಾರದ ಕಣ್ಣು ತಪ್ಪಿಸಿ ಅಷ್ಟೊಂದು ಬಾಂಗ್ಲಾದೇಶಿಗರು ಭಾರತಕ್ಕೆ ಹೇಗೆ ಬಂದರು? ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಸಿಎಂ ವಿರೋಧ

“ಈಗ ಕೇರಳ ಸರ್ಕಾರ ತರಲಿರುವ ಮಲೆಯಾಳಿ ಭಾಷಾ ಮಸೂದೆ-2025 ವಿಶೇಷವಾಗಿ ಕಾಸರಗೋಡು ಭಾಗದಲ್ಲಿರುವ ಅನೇಕ ಕನ್ನಡಿಗರಿಗೆ ಅನ್ಯಾಯವಾಗುತ್ತದೆ. ಇದರಿಂದ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.

“ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ” ಎಂದಿದ್ದಾರೆ.

“ಕಾಸರಗೋಡು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ” ಎಂದು ಹೇಳಿದ್ದಾರೆ.

“ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ” ಎಂದು ಹೇಳಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯಪಾಲರ ಭೇಟಿ

ಕೇರಳ ವಿಧಾನಸಭೆಯನ್ನು ಅಂಗೀಕರಿಸಲಾದ ‘ಮಲಯಾಳ ಭಾಷಾ ಮಸೂದೆ-2025’, “ಕಾಸರಗೋಡು ಜಿಲ್ಲೆಯಲ್ಲಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಆರೋಪಿಸಿ ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಭೇಟಿ ಮಾಡಿ, ಮಸೂದೆಯನ್ನು ತಡೆಹಿಡಿಯುವಂತೆ ಮನವಿ ಮಾಡಿದೆ.

“ಹೊಸ ಮಸೂದೆ ಪ್ರಕಾರ ಕಾಸರಗೋಡು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮತ್ತು ಖಾಸಗಿ ಕನ್ನಡ ಶಾಲೆಗಳಲ್ಲಿ1ರಿಂದ 10ನೇ ತರಗತಿವರೆಗೆ ಮೊದಲ ಭಾಷೆಯಾಗಿ ಮಲಯಾಳವನ್ನು ಬೋಧಿಸುವುದು ಕಡ್ಡಾಯವಾಗಲಿದೆ. ಕನ್ನಡ ವಿದ್ಯಾರ್ಥಿಗಳು ಮಲಯಾಳ ಭಾಷೆಯನ್ನು ತಿಳಿಯದಿದ್ದರೂ ಬಲವಂತವಾಗಿ ಕಲಿಯಬೇಕಾಗುತ್ತದೆ’ ಎಂದು ಪ್ರಾಧಿಕಾರವು ಕಳವಳ ವ್ಯಕ್ತಪಡಿಸಿದೆ.

prajavani2026 01 07cmnyhopafile8

‘ಸಂವಿಧಾನದ ಪ್ರಕಾರ ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕಾತಿ ಕಡ್ಡಾಯ. ಕಾಸರಗೋಡು ಜಿಲ್ಲೆಯ ಪೊಲೀಸ್ ಠಾಣೆಗಳು, ರೈಲು ನಿಲ್ದಾಣಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾಹಿತಿ ಫಲಕಗಳು ಕನ್ನಡದಲ್ಲೂ ಇರಬೇಕು. ಸರ್ಕಾರಿ ಹಾಗೂ ಸಾರ್ವಜನಿಕ ಕಚೇರಿಗಳ ಪತ್ರ ವ್ಯವಹಾರವನ್ನು ಸ್ಥಳೀಯ ಕನ್ನಡ ಭಾಷೆಯಲ್ಲಿ ನಡೆಸಬೇಕು. ಕಾಸರಗೋಡು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳೀಯ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೂ ಜನಸಂಖ್ಯೆ ಆಧಾರದಲ್ಲಿ ಆದ್ಯತೆ ನೀಡಬೇಕು. ಕನ್ನಡಿಗರ ಅಹವಾಲು ಆಲಿಸಲು ಕಾಸರಗೋಡು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಕೇರಳದಲ್ಲಿರುವ ಭಾಷಾ ಅಲ್ಪಸಂಖ್ಯಾತರ ಹಿತಗಳ ರಕ್ಷಣೆಗೆ ಕ್ರಮ ವಹಿಸುವಂತೆ ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ಸಚಿವಾಲಯ ಕೇರಳ ಸರ್ಕಾರಕ್ಕೆ ಹಲವಾರು ಬಾರಿ ಸೂಚಿಸಿದೆ. ಆದರೂ ಭಾಷಾ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ’ ಎಂದೂ ನಿಯೋಗವು ಆರೋಪಿಸಿದೆ.

ಕೇರಳ ಮಾದರಿ ಕರ್ನಾಟಕ ಪಾಲಿಸಲಿ

ಪಿಣರಾಯಿ ವಿಜಯನ್ ಅವರು ತರಲಿರುವ ‘ಮಲಯಾಳ ಭಾಷಾ ಮಸೂದೆ-2025’ ಈಗಾಗಲೇ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯನವರು ಸಹ ಕೇರಳ ಸರ್ಕಾರದ ರೀತಿಯಲ್ಲಿ ಕರ್ನಾಟಕದಲ್ಲಿಯೂ ಕಾನೂನು ತರಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕರ್ನಾಟಕದಲ್ಲಿಯೂ ‘ಕನ್ನಡ’ವೇ ಪ್ರಥಮ ಭಾಷೆಯಾಗಬೇಕು ಎಂದು ಹಲವು ದಶಗಳಿಂದ ಅನೇಕ ಕನ್ನಡಪರ ಮನಸ್ಸುಗಳು ಆಗ್ರಹ ಮಾಡುತ್ತಾ ಬಂದಿದ್ದಾರೆ. ಕರ್ನಾಟಕ ಸರ್ಕಾರವೂ ಸಹ “ಕನ್ನಡ ಭಾಷಾ ಮಸೂದೆ-2026” ಅನ್ನು ತರಲಿ ಎಂದು ಅನೇಕರು ಆಗ್ರಹಿಸುತ್ತಿದ್ದಾರೆ.

ಶಾಲೆಯಿಂದ ಹಿಡಿದು ಆಡಳಿತದವರೆಗೂ ದ್ವಿಭಾಷಾ ಕಾನೂನನ್ನು ಜಾರಿಗೆ ತರಬೇಕು ಎಂದು ಅನೇಕ ಕನ್ನಡಪರ ಸಂಘಟನೆಗಳು ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಾ ಬಂದಿವೆ. ಆದರೆ, ದ್ವಿಭಾಷಾ ನೀತಿಯ ಬಗ್ಗೆ ಅನೇಕ ವೇದಿಕೆಗಳಲ್ಲಿ ಮಾತನಾಡುವ ಸಿಎಂ ಸಿದ್ದರಾಮಯ್ಯನವರು ಕಾನೂನು ತರುವಲ್ಲಿ ಮನಸ್ಸು ತೋರುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಅದನ್ನು ವಿರೋಧ ಪಕ್ಷದ ನಾಯಕ ಪ್ರಶ್ನಿಸಿದ್ದರೆ ಕನ್ನಡಪರ ಕಾಳಜಿ ಎಂದು ಹೇಳಬಹುದಿತ್ತು. ಕನ್ನಡನಾಡಿಗೆ ಒಕ್ಕೂಟ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುವ ಧೈರ್ಯ ತೋರಬೇಕು. ಅದು ಬಿಟ್ಟು ಪ್ರತಿಯೊಂದಕ್ಕೂ ಕಾಂಗ್ರೆಸ್‌ ಕಾರಣ ಎಂಬುದು ದಡ್ಡತನವಾದೀತು.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...