ಗಡಿ ಭದ್ರತಾ ಪಡೆ ರಕ್ಷಣೆ ನೀಡದೆ ಜನರ ಜೀವ ತೆಗೆದಿದ್ದು ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆರೋಪ

Date:

ಮೋದಿ ಸರ್ಕಾರ ಭದ್ರತೆ ನೀಡದೇ ಇರುವ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ ಭಾರತದ 26 ಅಮಾಯಕ ನಾಗರೀಕರ ಹತ್ಯೆಯಾಯಿತು. ಪ್ರವಾಸಿಗರಿಗೆ ಪೊಲೀಸ್, ಗಡಿ ಭದ್ರತಾ ಪಡೆಯ ರಕ್ಷಣೆ ನೀಡದೆ ಜೀವ ತೆಗೆದಿದ್ದು ಮೋದಿ ಸರ್ಕಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಸಿದರು.

ಹೊಸಪೇಟೆಯಲ್ಲಿ ನಡೆದ ಸಮರ್ಪಣಾ ಸಂಕಲ್ಪ ‌ಸಮಾವೇಶದಲ್ಲಿ ಮಾತನಾಡಿದ ಅವರು, “ಆದರೂ ಮೋದಿ ಇದರ ಬಗ್ಗೆ ಒಂದು ಮಾತು ಆಡಲಿಲ್ಲ. ಕೇವಲ ತಮಗೆ ತೋಚಿದ್ದನ್ನು ಹೇಳಿಕೊಂಡು ಹೋದರು. ನಾನು ಕೇಳಿದ ಒಂದೇ ಒಂದು ಪ್ರಶ್ನೆಗೆ ಇದುವರೆಗೂ ಉತ್ತರ ನೀಡಿಲ್ಲ” ಎಂದರು.

“ಏ. 17 ರಂದು ಕಾಶ್ಮೀರಕ್ಕೆ ಮೋದಿಯವರು ಹೋಗಬೇಕಿತ್ತು. ಆದರೆ ಅಲ್ಲಿನ ಗುಪ್ತಚರ‌ ಇಲಾಖೆ ನೀವು ಬರುವ ಸಮಯದಲ್ಲಿ ಇಲ್ಲಿ ಗಲಾಟೆಯಾಗುತ್ತದೆ ಎಂದು ತಿಳಿಸಿದರು‌. ಈ ಕಾರಣಕ್ಕೆ ಅವರು ಅಲ್ಲಿಗೆ ಹೋಗುವುದನ್ನು ರದ್ದು ಮಾಡಿದರು. ಇದೇ ಮಾತನ್ನು ನೀವು ಏಕೆ ಪ್ರವಾಸಿಗರಿಗೆ ಹೇಳಲಿಲ್ಲ. ಇದಕ್ಕೆ ಮೋದಿಯವರು ಉತ್ತರ ನೀಡಬೇಕು. ಅಂದು ಎಚ್ಚರಿಕೆ ನೀಡಿದ್ದರೆ ಜನರು ಸಾಯುತ್ತಿರಲಿಲ್ಲ.‌ ಗಡಿಯಲ್ಲಿ ಘರ್ಷಣೆ ಉಂಟಾಗುತ್ತಿರಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಕಿಸ್ತಾನದ ಕೆಲಸ ಸದಾ ಭಾರತದ ಮೇಲೆ ಗೂಬೆ ಕೂರಿಸುವುದೇ ಆಗಿದೆ. ಅವರಿಗೆ ಶಕ್ತಿಯಿಲ್ಲ ಎಂದರೂ ಚೀನಾದವರಿಂದ ಬೆಂಬಲ ಪಡೆದು ನಮ್ಮ ಮೇಲೆ ದಾಳಿ ಮಾಡಿ ಪ್ರಚೋದನೆ ನೀಡುತ್ತಿದ್ದಾರೆ. ಇದನ್ನು ಎಂದಿಗೂ ಸಹ ನಮ್ಮ ದೇಶ ಸಹಿಸುವುದಿಲ್ಲ. ‌ನಾವು ಒಗ್ಗಟ್ಟಿನಿಂದ ಇದ್ದೇವೆ” ಎಂದರು.

“ದೇಶಕ್ಕಾಗಿ ಹೋರಾಡುವ ಗುತ್ತಿಗೆಯನ್ನು ಬಿಜೆಪಿಯವರು ಮಾತ್ರ ತೆಗೆದುಕೊಂಡಿಲ್ಲ. ನಾವು ಸಹ ದೇಶಕ್ಕಾಗಿ ಹೋರಾಟ ಮಾಡಿದವರೇ. ಮಹಾತ್ಮ ಗಾಂಧಿ, ಇಂದಿರಾಗಾಂಧಿ, ‌ರಾಜೀವ್ ಗಾಂಧಿ ಅವರು ಈ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಇಂತಹ ದೊಡ್ಡ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ. ಇಂತಹ ಪಕ್ಷದ ಮೇಲೆ ನೀವು ಯಾವುದೇ ಕಾರಣಕ್ಕೂ ಗೂಬೆ ಕೂರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ದೇಶದ ಪ್ರಧಾನಿ ಮೋದಿಯವರು ಸಹ 20 ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಹೇಳಿದರು. ಅವರು ಎಂತಹ ಗ್ಯಾರಂಟಿಗಳನ್ನು ನೀಡಿದ್ದಾರೆ ಎಂಬುದು ನಮಗೆಲ್ಲಾ ತಿಳಿದಿದೆ‌. ವಿದೇಶದಲ್ಲಿ ಇರುವ ಕಪ್ಪುಹಣ ತರುತ್ತೇವೆ ಎಂದರು ಅದನ್ನು ತಂದರೇ? ಯವ ಜನರಿಗೆ ನೌಕರಿ ಕೊಡುತ್ತೇವೆ ಎಂದರು ಇದು ಸಾಧ್ಯವಾಯಿತೇ? ನೋಟ್ ಬ್ಯಾನ್ ಮಾಡಿ ಬಡವರ ಸಂಸಾರಗಳನ್ನು ಹಾಳು ಮಾಡಿದರು. ಆದರೆ ನಾವು ಮಾತು ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ” ಎಂದರು.

“ಇಡಿ‌ ಛೂ ಬಿಟ್ಟಿದ್ದೀರಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ದಾಳಿ ಮಾಡಿಸಿದ್ದೀರಿ. ನಮ್ಮ‌ ಮೇಲೆ ದಾಳಿ ಮಾಡಿಸಿ ಮಣಿಸಬೇಕು ಎನ್ನುವ ಉದ್ದೇಶ ಬಿಜೆಪಿಯವರಿಗೆ ಇದ್ದರೆ ಅದು ಅವರ ಹುಂಬತನ. ಕಾಂಗ್ರೆಸ್ ಪಕ್ಷ ಎಂದಿಗೂ ಯಾರಿಗೂ ಮಣಿಯುವುದಿಲ್ಲ, ಬಗ್ಗುವುದಿಲ್ಲ. ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ನಡೆಸದೇ ನಮ್ಮ ದೇಶದ ನಿಯೋಗವನ್ನು ಭಯೋತ್ಪಾದಕ ದಾಳಿಯ ಬಗ್ಗೆ ಒಂದಷ್ಟು ದೇಶಗಳಿಗೆ ತಿಳಿಸಲು ಕಳುಹಿಸುತ್ತಿದ್ದಾರೆ‌.‌ ನಮಗೆ ದೇಶ ಮುಖ್ಯ. ಈ ದೇಶಕ್ಕೆ ಸಂವಿಧಾನ ನೀಡಿದ ಪಕ್ಷ ನಮ್ಮದು” ಎಂದು ಹೇಳಿದರು.

ಬಿಹಾರದಲ್ಲಿ ಚುನಾವಣೆ ಭಾಷಣ ಮಾಡಿಕೊಂಡು ಓಡಾಡುತ್ತಿದ್ದರು

“ಬಿಜೆಪಿಯದ್ದು ಬರೀ ಸುಳ್ಳು ‌ಹೇಳುವುದೇ ಕೆಲಸ. ನಾವು ದೇಶದ ಬಗ್ಗೆ ಮಾತನಾಡೋಕೆ ಸಭೆ ಸೇರಿದರೆ ಅವರು ಬಿಹಾರದಲ್ಲಿ ಚುನಾವಣೆ ಭಾಷಣ ಮಾಡಿಕೊಂಡು ಓಡಾಡುತ್ತಿದ್ದರು. ಎರಡು ಸಲ ಸರ್ವ ಪಕ್ಷ‌‌ ಸಭೆ ಕರೆದರೂ ಮೋದಿಯವರು ಬರಲಿಲ್ಲ. ಅವರಿಗೆ ದೇಶಪ್ರೇಮ ಇದ್ದಿದ್ದರೆ ಏಕೆ ಸರ್ವ ಪಕ್ಷ ಸಭೆಗೆ ಬರಲಿಲ್ಲ. ನಾವುಗಳು ಏನಾದರೂ ಒಂದೇ ಒಂದು ಸಭೆಗೆ ಬರದೇ ಇದ್ದರೆ ದೇಶದ್ರೋಹಿಗಳು ಎಂದು ಹಣೆಪಟ್ಟಿ ಕಟ್ಟುತ್ತಾರೆ” ಎಂದು ಹರಿಹಾಯ್ದರು.

“ಕೇವಲ ಭಾಷಣ ಮಾಡುವವರಿಂದ, ಬೊಗಳೆ ಮಾತುಗಳಿಂದ ದೇಶ ಉದ್ದಾರವಾಗುವುದಿಲ್ಲ. ಸೊಫಿಯಾ ಖುರೇಶಿ ಎನ್ನುವ ಮಿಲಿಟರಿಯ ವಕ್ತಾರೆ ಮಾತನಾಡಿದ‌ ಮೇಲೆ ಬಿಜೆಪಿಯ ಶಾಸಕನೊಬ್ಬ ಆಕೆಗೆ ಪಾಕಿಸ್ತಾನದ ನಂಟಿದೆ ಎಂದು ಹೇಳುತ್ತಾನೆ. ಇಂತಹ ಜನರಿಗೆ ಯಾವ ಶಿಕ್ಷೆ ನೀಡಬೇಕು ಎಂಬುದನ್ನು ಜನರೇ ಹೇಳಬೇಕು. ಸೈನ್ಯದ ವಿರುದ್ಧ ಮಾತನಾಡಿದ ಆತನನ್ನು ಪಕ್ಷದಿಂದ ಕಿತ್ತು ಹಾಕಿ ಮೋದಿಯವರೇ ಏಕೆ ಇನ್ನೂ ಇಟ್ಟುಕೊಂಡು ಕುಳಿತಿದ್ದೀರಿ? ಬಿಜೆಪಿಯಲ್ಲಿ‌ ಇರುವ ದೇಶದ್ರೋಹಿಗಳನ್ನು ಮೊದಲು ಪಕ್ಷದಿಂದ ತೆಗೆದುಹಾಕಿ. ಆಕೆಯ ಹೆಸರು ಖುರೇಶಿ ಎಂದು ಇರುವ ಕಾರಣಕ್ಕೆ ಸೈನ್ಯದಲ್ಲಿ ಇರುವವರಿಗೆ ಹೀಯಾಳಿಸುವಿರಾ ಬಿಜೆಪಿಯವರೇ” ಎಂದು ಪ್ರಶ್ನಿಸಿದರು.

ಜಾತಿಗಣತಿ | ಕೆಟ್ಟು ಹೆಸರು ತರಬೇಡಿ

“ರಾಜ್ಯದಲ್ಲಿ ಜಾತಿಗಣತಿ ಅನುಷ್ಠಾನ ಅಚ್ಚುಕಟ್ಟಾಗಿ ನಡೆಯಬೇಕು.‌ ಜಾತಿ ಗಣತಿ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರಿಗೆ ಕೆಟ್ಟ ಹೆಸರು ಬರುವಂತೆ ಕೆಲಸ ಮಾಡಬಾರದು. ಒಳಮೀಸಲಾತಿಯ ವಿರೋಧಿ ನಾನು ಎಂದಿಗೂ ಅಲ್ಲ. ಆದರೆ ಬೇಡ ಜಂಗಮ‌ಜಾತಿಗೆ ಏಕೆ ಒಳ ಮೀಸಲಾತಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಬಡ ಲಿಂಗಾಯತರಿಗೆ ಸರ್ಕಾರ ಅನುಕೂಲ ಮಾಡಿಕೊಡಲಿ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೇವಲ 500 ಜನ ಇದ್ದ ಜನಸಂಖ್ಯೆ ಹೇಗೆ 4- 5 ಲಕ್ಷಕ್ಕೆ ಏರಿಕೆಯಾಗಿದೆ. ಅವರನ್ನು ಏಕೆ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಪರಿಶಿಷ್ಟರಿಗೆ ಸಹಾಯ ಮಾಡಬೇಕು ಎಂಬುದು ನಿಮ್ಮ ಉದ್ದೇಶವೋ ಅಥವಾ ಅವಕಾಶಗಳನ್ನು ಕಿತ್ತುಕೊಳ್ಳಬೇಕು ಎಂಬುದೋ? ಬೇಡ ಜಂಗಮ ಎಂದು ಯಾರು ನಕಲಿ ಪತ್ರ ನೀಡುವವರಿಗೆ ಶಿಕ್ಷೆ ನೀಡಬೇಕು.‌ ಈ ಅನ್ಯಾಯ ತಡೆಯಬೇಕು ಎಂದು ಸರ್ಕಾರದ ಬಳಿ ಕೈ ಮುಗಿದು ಕೇಳುತ್ತೇನೆ” ಎಂದರು.

“ಎರಡು ವರ್ಷದ ಆಡಳಿತ ಅವಧಿಯಲ್ಲಿ ಚುನಾವಣೆಗೆ ಮೊದಲು ಕೊಟ್ಟಂತಹ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿ ರಾಜ್ಯದ ಅಭಿವೃದ್ಧಿ ಮಾಡುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಕೋಟಿ‌ ಅಭಿನಂದನೆಗಳು. ಗ್ಯಾರಂಟಿಗಳನ್ನು ನೀಡಬೇಕು ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡಬೇಕು. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಮುಂದಿದ್ದ ಸವಾಲು. ಇದನ್ನು ಯಶಸ್ವಿಯಾಗಿ ಕಾಂಗ್ರೆಸ್ ಸರ್ಕಾರ ನೆರವೇರಿಸಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...