ಧೈರ್ಯವಿದ್ರೆ ಅನಂತ್‌ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ: ಮೋದಿಗೆ ಖರ್ಗೆ ಸವಾಲು

Date:

ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, “ಧೈರ್ಯವಿದ್ರೆ ಅನಂತ್‌ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ” ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸವಾಲೆಸೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ “ಪ್ರಧಾನಿ ಮೋದಿಗೆ ತಾಕತ್ತಿದ್ದರೆ ಬಾಯಿಗೆ ಬಂದಂತೆ ಮಾತನಾಡಿರುವ ಸಂಸದ ಅನಂತ್‌ ಕುಮಾರ್ ಹೆಗಡೆಯನ್ನು ನೀವು ಪಕ್ಷದಿಂದ ಉಚ್ಛಾಟಿಸಿ” ಎಂದು ಹೇಳಿರುವ ಖರ್ಗೆ, “ಬಿಜೆಪಿ ಸರ್ಕಾರವು ಸಂವಿಧಾನದಲ್ಲಿ ಏನೇ ಬದಲಾವಣೆ ಮಾಡಲು ಮುಂದಾದರೂ ಕೂಡಾ ದೇಶದಲ್ಲಿ ತೀವ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಮೋದಿ 400 ಪಾರ್ (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಎಂದು ಹೇಳುವುದು ಯಾಕೆಂದು ಈಗ ಅರ್ಥವಾಗುತ್ತಿದೆ. ಪ್ರಧಾನಿ ಮೋದಿ ಎಂದಿಗೂ ಸಂವಿಧಾನ ಬದಲಾಯಿಸುವ ಬಗ್ಗೆ ನೇರವಾಗಿ ಮಾತನಾಡಲ್ಲ, ಆದರೆ ಬೇರೆಯವರಲ್ಲಿ ಈ ವಿಷಯ ಹೇಳಿಸುತ್ತಾರೆ” ಎಂದು ಖರ್ಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಮಾತನಾಡಿ, “ಸಂವಿಧಾನವನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡಿದರೂ ದೇಶದಾದ್ಯಂತ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದು, ಇದನ್ನು “ಸಾಮಾಜಿಕ ನ್ಯಾಯ ಮತ್ತು ಶೋಷಣೆ ನಡುವಿನ ಕದನ” ಎಂದರು.

ಬಿಜೆಪಿ-ಆರ್‌ಎಸ್‌ಎಸ್‌ ಅನ್ನು “ಮನುವಾದಿ” ಎಂದು ಕರೆದಿರುವ ಖರ್ಗೆ, “ಆಡಳಿತ ಪಕ್ಷ ಎಂದಿಗೂ ಅಂಬೇಡ್ಕರ್‌ರ ಸಂವಿಧಾನವನ್ನು ಒಪ್ಪಿಲ್ಲ. ಈ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ, ಎಸ್‌ಸಿ/ಎಸ್‌ಟಿ ಮೀಸಲಾತಿ, ಸಮಾನತೆಯ ಹಕ್ಕು ಮತ್ತು ಜಾತ್ಯಾತೀತತೆಯ ವಿಧೇಯಕಗಳನ್ನು ತಿದ್ದುಪಡಿ ಮಾಡಿದೆ” ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರಕನ್ನಡ ಸಂಸದ ಅನಂತ್​ಕುಮಾರ್ ಹೆಗಡೆ ಹೇಳಿಕೆ ನೀಡಿದ್ದು, ಬಿಜೆಪಿ ಮಾತ್ರ “ಇದು ಅನಂತ್ ಕುಮಾರ್ ವೈಯಕ್ತಿಕ ಅಭಿಪ್ರಾಯ ಪಕ್ಷದ ನಿಲುವಲ್ಲ” ಎಂದಿದೆ. ಇಷ್ಟಕ್ಕೆ ನಿಲ್ಲದ ಸಂಸದ ಅನಂತ್ ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...