‘ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Date:

ಕಾಂಗ್ರೆಸ್​ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ (I.N.D.I.A) ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದ್ದರೂ, ಅದನ್ನು ಅವರು ತಿರಸ್ಕರಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಇಂಡಿಯಾ ಮೈತ್ರಿಕೂಟವು ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರಾಗಿ ಮಾಡುವುದಕ್ಕೆ ನಿರ್ಧಾರಕ್ಕೆ ಮಿತ್ರ ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 14 ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇವತ್ತಿನ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಿದ್ದರು. ಕಾಂಗ್ರೆಸ್​ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಟಿಎಂಸಿ ಕೆಲವು ತೊಡಕುಗಳಿರುವುದರಿಂದ ಇವತ್ತಿನ ಸಭೆಗೆ ದೀದಿ ಹಾಜರಾಗಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

28 ವಿರೋಧ ಪಕ್ಷಗಳ INDIA ಮೈತ್ರಿಕೂಟವು ಶನಿವಾರ ನಡೆಸಿದ ವರ್ಚುವಲ್ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇತ್ತೀಚೆಗಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ಸೂಚಿಸಿದ್ದವು. ಇದು ವ್ಯಾಪಕ ಚರ್ಚೆಯನ್ನು ಕೂಡ ಹುಟ್ಟು ಹಾಕಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...